ADVERTISEMENT

ತಡವಾಗಲಿರುವ ಬೆಂಗಳೂರು-ಮೈಸೂರು ರೈಲು

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2024, 15:57 IST
Last Updated 4 ಡಿಸೆಂಬರ್ 2024, 15:57 IST
<div class="paragraphs"><p> ರೈಲು </p></div>

ರೈಲು

   

ಬೆಂಗಳೂರು: ನಾಯಂಡಹಳ್ಳಿ ಮತ್ತು ಕೆಂಗೇರಿ ನಿಲ್ದಾಣಗಳಲ್ಲಿ ಸುರಕ್ಷತೆ ಮತ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಎಸ್ಎಂವಿಟಿ ಬೆಂಗಳೂರು-ಮೈಸೂರು ಡೈಲಿ ಪ್ಯಾಸೆಂಜರ್ ವಿಶೇಷ ರೈಲು ಕೆಲವು ದಿನ ತಡವಾಗಿ ಚಲಿಸಲಿದೆ.

ಡಿಸೆಂಬರ್ 6, 8 ಮತ್ತು 10ರಂದು ನಿಗದಿತ ಸಮಯಕ್ಕಿಂತ 60 ನಿಮಿಷ ತಡವಾಗಿ ಎಸ್ಎಂವಿಟಿ ಬೆಂಗಳೂರು ನಿಲ್ದಾಣದಿಂದ ಹೊರಡಲಿದೆ. ಇದೆ ರೈಲು ಡಿ.15ರಂದು 50 ನಿಮಿಷ ತಡವಾಗಿ ಹೊರಡಲಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.