ಅಪಘಾತ
–ಪ್ರಾತಿನಿಧಿಕ ಚಿತ್ರ
ಬೆಂಗಳೂರು: ತಲಘಟ್ಟಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು ಲಾರಿಗಳ ನಡುವೆ ಬುಧವಾರ ರಾತ್ರಿ ಸಂಭವಿಸಿದ್ದ ಅಪಘಾತದಲ್ಲಿ ಹಿಂಬದಿಯ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಜ್ಜಯ್ಯ(25) ಮೃತಪಟ್ಟ ಲಾರಿ ಚಾಲಕ. ಠಾಣಾ ವ್ಯಾಪ್ತಿಯ ನೈಸ್ ರಸ್ತೆಯಲ್ಲಿ ಬುಧವಾರ ರಾತ್ರಿ 10.30ರ ಸುಮಾರಿಗೆ ಅಪಘಾತ ಸಂಭವಿಸಿತ್ತು.
ನೈಸ್ ರಸ್ತೆಯಲ್ಲಿ ಮುಂದೆ ಸಾಗುತ್ತಿದ್ದ ಲಾರಿಗೆ ಹಿಂದಿನಿಂದ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದು ಅಪಘಾತವಾಗಿದೆ. ಹಿಂಬದಿಯಲ್ಲಿ ಸಾಗುತ್ತಿದ್ದ ಲಾರಿಯನ್ನು ಅಜ್ಜಯ್ಯ ಅವರು ಚಾಲನೆ ಮಾಡುತ್ತಿದ್ದರು. ಅಜ್ಜಯ್ಯ ಅವರು ಅತಿ ವೇಗವಾಗಿ ಚಾಲನೆ ಮಾಡಿಕೊಂಡು ಹೋಗಿ, ಮುಂದಿನ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.