
ಬೆಂಗಳೂರು: ಪ್ರತಿಷ್ಠಿತ ಕಂಪನಿಯ ಹೆಸರಿನಲ್ಲಿ ನಕಲಿ ಸಿಗರೇಟ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಲ್ಲೇಶ್ವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮುಂಬೈ ಮೂಲದ ಅಕ್ತರ್ ಖಾನ್ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ₹14 ಲಕ್ಷ ಮೌಲ್ಯದ 5,950 ನಕಲಿ ಸಿಗರೇಟ್ ಪ್ಯಾಕ್ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ದೆಹಲಿಯಿಂದ ನಕಲಿ ಸಿಗರೇಟ್ ತರುತ್ತಿದ್ದ ಆರೋಪಿಗಳು, ನಗರದ ಹೋಟೆಲ್‌ಗಳಲ್ಲಿ ವಾಸ್ತವ್ಯ ಮಾಡುತ್ತಿದ್ದರು. ನಗರದ ಕೆಲವು ಅಂಗಡಿಗಳಿಗೆ ನಕಲಿ ಸಿಗರೇಟ್ ಪೂರೈಸಿ ಪರಾರಿ ಆಗುತ್ತಿದ್ದರು ಎಂದು ಪೊಲೀಸರು ಹೇಳಿದರು.
ಐಪಿಆರ್ ಸರ್ವೀಸಸ್‌ನ ಉಪ ವ್ಯವಸ್ಥಾಪಕ ನೀಡಿದ ದೂರು ಆಧರಿಸಿ, ಆರೋಪಿಗಳನ್ನು ಬಂಧಿಸಲಾಯಿತು. ಆರೋಪಿಗಳು ಐಟಿಸಿ ಸಿಗರೇಟ್ ತಯಾರಿಕೆ, ವಿತರಣೆ ಹಾಗೂ ಮಾರಾಟದಲ್ಲಿ ತೊಡಗಿದ್ದರು ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.