
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ನಿರ್ಮಿಸಿರುವ ಡಾ.ಕೆ.ಶಿವರಾಮ ಕಾರಂತ ಬಡಾವಣೆಗೆ ಜಮೀನು ನೀಡಿದ ರೈತರಿಗೆ ಅಭಿವೃದ್ಧಿಪಡಿಸಿದ ಶೇಕಡ 50ರಷ್ಟು ನಿವೇಶನ ಹಂಚಿಕೆ ಮಾಡಬೇಕು ಎಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಯೋಜಕ ರಾಮಗೊಂಡನಹಳ್ಳಿ ಎಂ.ರಮೇಶ್ ಆಗ್ರಹಿಸಿದ್ದಾರೆ.
ಬಿಡದಿ ಟೌನ್‌ಶಿಪ್ ಯೋಜನೆ, ದೊಡ್ಡಬಳ್ಳಾಪುರದಲ್ಲಿ ಕೆಐಎಡಿಬಿ ಯೋಜನೆಗಳನ್ನು ಶೇಕಡ 50:50ರ ಅನುಪಾತದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಶಿವರಾಮ ಕಾರಂತ ಬಡಾವಣೆ ಯೋಜನೆಯಲ್ಲಿ ರೈತರಿಗೆ ಇನ್ನೂ ನಿವೇಶನ ಹಂಚಿಕೆ ಮಾಡಿಲ್ಲ. ಹಾಗಾಗಿ ಅಭಿವೃದ್ಧಿಪಡಿಸಿದ 100, 80 ಹಾಗೂ 60 ಅಡಿ ರಸ್ತೆಗಳಿಗೆ ಹೊಂದಿಕೊಂಡಂತೆ ವಾಣಿಜ್ಯ ಹಾಗೂ ಮೂಲೆ ನಿವೇಶನಗಳನ್ನು ಹಂಚಿಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಾಧಿಕಾರವು ಪುರೋಭಿವೃದ್ಧಿ ತೆರಿಗೆಯನ್ನು (ಅಭಿವೃದ್ಧಿ ತೆರಿಗೆ) ಅವೈಜ್ಞಾನಿಕವಾಗಿ 17 ಗ್ರಾಮಗಳಿಗೆ ವಿಧಿಸಿದೆ. ಕೂಡಲೇ ತೆರಿಗೆಯನ್ನು ರದ್ದುಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.