
ಪ್ರಜಾವಾಣಿ ವಾರ್ತೆ
ಬೀದಿ ನಾಯಿ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಸಮುದಾಯದ ನಾಯಿಗಳು/ ಬೀದಿ ನಾಯಿಗಳನ್ನು ಮಾನವೀಯ ನಿರ್ವಹಣೆಯ ಭಾಗವಾಗಿ, ಸಾರ್ವಜನಿಕರು, ಸಂಘ-ಸಂಸ್ಥೆಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ಮತ್ತು ಸ್ವಯಂಸೇವಾ ಸಂಸ್ಥೆಗಳು ದತ್ತು ಪಡೆದುಕೊಳ್ಳುವಂತೆ ಬೆಂಗಳೂರು ಕೇಂದ್ರ ನಗರ ಪಾಲಿಕೆ ಕೋರಿದೆ.
ದತ್ತು ನೀಡಲಾಗುವ ನಾಯಿಗಳ ಆರೋಗ್ಯ ತಪಾಸಣೆ ಮಾಡಿ, ಲಸಿಕೆ ನೀಡಿ, ಸಂತಾನಶಕ್ತಿ ನಿರೋಧಕ ಶಸ್ತ್ರಚಿಕಿತ್ಸೆ ಮಾಡಿರಲಾಗಿರುತ್ತದೆ ಎಂದು ಪಶುಸಂಗೋಪನೆ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ದತ್ತು ಪಡೆಯಲು ಇಚ್ಛಿಸುವವರು ಎನ್.ಆರ್. ಚೌಕ ದಲ್ಲಿರುವ ಪಾಲಿಕೆಯ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕರನ್ನು ಸಂಪರ್ಕಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.