ADVERTISEMENT

ಎನ್‌ಐಎ ಶೋಧ: ಶಂಕಿತ ನಾಲ್ವರು ಉಗ್ರರ ಬಂಧನ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 20:22 IST
Last Updated 4 ಆಗಸ್ಟ್ 2021, 20:22 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಐಸಿಸ್‌ ಉಗ್ರರೊಂದಿಗೆ ನಂಟು ಹೊಂದಿರುವ ಶಂಕೆಯ ಮೇರೆಗೆ ಬೆಂಗಳೂರಿನ ಶಂಕರ್ ವೆಂಕಟೇಶ್‌ ಪೆರುಮಾಳ್‌ ಎಂಬಾತನನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ.

‘ಜಮ್ಮು ಮತ್ತು ಕಾಶ್ಮೀರ ಹಾಗೂ ಕರ್ನಾಟಕ ಸೇರಿದಂತೆ ಐದು ಸ್ಥಳಗಳಲ್ಲಿ ಎನ್‌ಐಎ ದಾಳಿ ನಡೆಸಿತು. ರಾಜ್ಯದ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ದಾಳಿ ನಡೆಸಲಾಯಿತು. ಶಂಕಿತರಾದ ಬೆಂಗಳೂರಿನಶಂಕರ್ ವೆಂಕಟೇಶ್‌ ಪೆರುಮಾಳ್‌, ಮಂಗಳೂರಿನ ಉಮ್ಮರ್ ಅಬ್ದುಲ್ ರೆಹಮಾನ್, ಶ್ರೀನಗರದ ಒಬೇದ್ ಹಮೀದ್ ಹಾಗೂ ಕಾಶ್ಮೀರದ ಮುಜಾಮಿಲ್ ಹಸ್ಸನ್ ಭಟ್ ಎಂಬ ನಾಲ್ವರನ್ನು ಬಂಧಿಸಲಾಗಿದೆ’ ಎಂದು ಎನ್‌ಐಎ ಮೂಲಗಳು ತಿಳಿಸಿವೆ.

‘ಐಸಿಎಸ್ ಉಗ್ರರೊಂದಿಗೆ ಸಂಪರ್ಕದಲ್ಲಿದ್ದ ಮೊಹಮದ್ ಅಮೀನ್ ಜೊತೆಗೆ ಈ ನಾಲ್ವರು ನಂಟು ಹೊಂದಿದ್ದರು ಎಂದು ಆರೋಪಿಸಲಾಗಿದೆ. ಅಮೀನ್‌ಉಗ್ರಗಾಮಿ ಚಟುವಟಿಕೆಗಳಿಗೆ ಹಣಕಾಸು ಒದಗಿಸುತ್ತಿದ್ದ. ಸಾಮಾಜಿಕ ಜಾಲತಾಣಗಳ ಮುಖೇನ ಹಣ ಸಂಗ್ರಹಿಸುವ ಕೃತ್ಯದಲ್ಲಿ ಆರೋಪಿಗಳೂ ಭಾಗಿಯಾಗಿರುವ ಶಂಕೆ ಇದೆ’ ಎಂದೂ ಹೇಳಲಾಗಿದೆ.

ADVERTISEMENT

ಬಂಧನದ ವೇಳೆ ಲ್ಯಾಪ್‌ಟಾಪ್, ಹಾರ್ಡ್‌ಡಿಸ್ಕ್‌, ಪೆನ್ ಡ್ರೈವ್, ಸಿಮ್ ಕಾರ್ಡ್‌ ಹಾಗೂ ಎಲೆಕ್ಟ್ರಾನಿಕ್ ವಸ್ತುಗಳನ್ನು ಜಪ್ತಿ ಮಾಡಿರುವುದಾಗಿರಾಷ್ಟ್ರೀಯ ತನಿಖಾ ದಳ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.