ಬೆಂಗಳೂರು: ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ ಹಣ ದೋಚಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಿಜಯನಗರ ನಿವಾಸಿ ಮಹೇಶ್ (34) ಬಂಧಿತ.
ಆರೋಪಿ ವಿಜಯನಗರದ ಸರ್ವೀಸ್ ರಸ್ತೆಯಲ್ಲಿರುವ ಕೆಎನ್‌ಎಸ್ ಕಚೇರಿಯಲ್ಲಿ ಕ್ಯಾಶ್ ಬಾಕ್ಸ್‌ನಲ್ಲಿದ್ದ ₹25 ಲಕ್ಷವನ್ನು ದೋಚಿ ಪರಾರಿಯಾಗಿದ್ದ. ಕಚೇರಿ ಸಿಬ್ಬಂದಿ ನೀಡಿದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
ನಿವೃತ್ತ ಪಿಎಸ್‌ಐ ಪುತ್ರ ಮಹೇಶ್, ಕೆಎನ್‌ಎಸ್ ಕಚೇರಿಯಲ್ಲಿ ಎರಡು ವರ್ಷಗಳಿಂದ ಡಾಕ್ಯುಮೆಂಟ್ ಎಕ್ಸಿಕ್ಯುಟಿವ್ ಕೆಲಸ ಮಾಡಿಕೊಂಡಿದ್ದ. ಮಾರ್ಚ್ 20ರಂದು ಕಚೇರಿಯಲ್ಲಿದ್ದ ಹಣ ದೋಚಿ ಮೂಡಲಪಾಳ್ಯದ ತನ್ನ ಸ್ನೇಹಿತನ ಮನೆಯಲ್ಲಿ ಇಟ್ಟಿದ್ದ. ವೈಯಕ್ತಿಕ ಖರ್ಚಿಗಾಗಿ ₹50 ಸಾವಿರ ತೆಗೆದುಕೊಂಡು ಹೋಗಿದ್ದ. ಬಳಿಕ ತನಿಖೆ ಕೈಗೊಂಡು ಆರೋಪಿಯನ್ನು ಮಡಿಕೇರಿಯಲ್ಲಿ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
‘ಸ್ನೇಹಿತನ ಮನೆಯಲ್ಲಿದ್ದ ₹24.50 ಲಕ್ಷ ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.