ADVERTISEMENT

ಕರ್ಕಶ ಹಾರ್ನ್‌: ಸವಾರರ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2024, 0:30 IST
Last Updated 8 ಫೆಬ್ರುವರಿ 2024, 0:30 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ನಗರದ ಸಂಚಾರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು, ಕರ್ಕಶ ಹಾರ್ನ್‌, ದೋಷಪೂರಿತ ಸೈಲೆನ್ಸರ್‌, ನಂಬರ್‌ ಪ್ಲೇಟ್‌ ಮರೆಮಾಚುವಿಕೆ ಹಾಗೂ ದೋಷಪೂರಿತ ನಂಬರ್‌ ಪ್ಲೇಟ್ ಬಳಸುತ್ತಿದ್ದ 1,510 ಬೈಕ್‌ ಸವಾರರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕರ್ಕಶ ಹಾರ್ನ್‌ ಬಳಕೆ ಮಾಡುತ್ತಿದ್ದ 483, ದೋಷಪೂರಿತ ಸೈಲೆನ್ಸರ್‌ ಅಳವಡಿಸಿಕೊಂಡಿದ್ದ 137 ಹಾಗೂ ದೋಷಪೂರಿತ ನಂಬರ್‌ ಪ್ಲೇಟ್‌ ಅಳವಡಿಕೆ ಹಾಗೂ ನಂಬರ್‌ ಪ್ಲೇಟ್ ಮರೆಮಾಚಿದ್ದ 890 ಮಂದಿ ವಿರುದ್ಧ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.