
ಪ್ರಜಾವಾಣಿ ವಾರ್ತೆ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಗೊಳಪಟ್ಟ ಎಲ್ಲ ಕಾಲೇಜುಗಳ ಸಿಬ್ಬಂದಿಗೆ ತಿಂಗಳ ಎರಡನೇ ಮತ್ತು 4ನೇ ಶನಿವಾರಗಳಂದು ರಜೆ ನೀಡಲಾಗಿದೆ.
ಸರ್ಕಾರ ಈಗಾಗಲೇ ಹೊರಡಿಸಿರುವ ಆದೇಶವನ್ನು ವಿಶ್ವವಿದ್ಯಾಲಯದಲ್ಲಿ ತಕ್ಷಣದಿಂದ ಜಾರಿಗೆ ತರಲಾಗಿದೆ. ಸಿಬ್ಬಂದಿಯ ಸಾಂದರ್ಭಿಕ ರಜೆಯನ್ನು 15ರಿಂದ 10ಕ್ಕೆ ಇಳಿಸಲಾಗಿದೆ.
ಬೆಂಗಳೂರು ವಿಶ್ವವಿದ್ಯಾಲಯ, ವಿಶ್ವವಿದ್ಯಾಲಯ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು, ವಿಶ್ವವಿದ್ಯಾಲಯ ಕಾನೂನು ಕಾಲೇಜು, ದೈಹಿಕ ಶಿಕ್ಷಣ ಶಿಕ್ಷಕ ಕಾಲೇಜು ಹಾಗೂ ರಾಮನಗರದ ಸ್ನಾತಕೋತ್ತರ ಕೇಂದ್ರಗಳಿಗೆ ಇದು ಅನ್ವಯವಾಗಲಿದೆ ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.