ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದ ಎಲ್ಲ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಜೂನ್ 20ರಂದು ರಜೆ ನೀಡಲಾಗಿದೆ ಎಂದು ಕುಲಸಚಿವರು ತಿಳಿಸಿದ್ದಾರೆ.
ವಿಶ್ವವಿದ್ಯಾಲಯದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.