ADVERTISEMENT

ಬೆಂಗಳೂರು ವಿ.ವಿ ಕುಲಪತಿ ತಪ್ಪು ಮಾಡಿಲ್ಲ: ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 31 ಮೇ 2022, 3:54 IST
Last Updated 31 ಮೇ 2022, 3:54 IST
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ
ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ   

ಬೆಂಗಳೂರು: ‘ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್‌ ಅನುಮೋದನೆ ಪಡೆದ ಬಳಿಕವೇ ಅಲ್ಲಿನ ಕುಲಪತಿ ₹ 29 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದ್ದಾರೆ.

‘ವಿಶ್ವವಿದ್ಯಾಲಯದ ವ್ಯಾಪ್ತಿಯ ಯೂನಿವರ್ಸಿಟಿ ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜಿಗೆ (ಯುವಿಸಿಇ) ಈ ಅನುದಾನ ಒದಗಿಸಿದ್ದು, ಕುಲಪತಿಯಿಂದ ಯಾವುದೇ ತಪ್ಪು ನಡೆದಿಲ್ಲ. ಸರಿಯಾದ ಮಾಹಿತಿ ಇಲ್ಲದೇ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ’ ಎಂದು ಅಶ್ವತ್ಥ ನಾರಾಯಣ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದ್ದಾರೆ.

ವಿಶ್ವವಿದ್ಯಾಲಯದ ಅಭಿವೃದ್ಧಿ ಚಟುವಟಿಕೆಗಳಿಗೆ ಮೀಸಲಿಟ್ಟಿದ್ದ ಹಣವನ್ನು ವಿಶ್ವೇಶ್ವರಯ್ಯ ಎಂಜಿನಿಯರಿಂಗ್‌ ಕಾಲೇಜು ವಿಶ್ವವಿದ್ಯಾಲಯದ (ಯುವಿಸಿಇ) ಮೆಕ್ಯಾನಿಕಲ್‌ ವಿಭಾಗದ ಕಟ್ಟಡ ನಿರ್ಮಾಣಕ್ಕೆ ವರ್ಗಾಯಿಸಲು ನಿರ್ಧಾರ ಕೈಗೊಂಡಿರುವುದಕ್ಕೆ ಆಕ್ಷೇಪಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ADVERTISEMENT

ಇಬ್ಬರು ಸಂಶೋಧನಾ ವಿದ್ಯಾರ್ಥಿಗಳ ವಿರುದ್ಧ ಹಣಕಾಸು ಅಧಿಕಾರಿ (ಪ್ರಭಾರ) ಆರ್‌. ಜಯಲಕ್ಷ್ಮಿ ಅವರು ಜ್ಞಾನಭಾರತಿ ಪೊಲೀಸ್‌ ಠಾಣೆಗೆ ನೀಡಿರುವ ದೂರು ವಾಪಸ್ ಪಡೆಯಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.