ಬೆಂಗಳೂರು: ಕೋವಿಡ್-19 ಪರಿಸ್ಥಿತಿಯ ಕಾರಣ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವೇಣುಗೋಪಾಲ್ ಕೆ.ಆರ್. ಅವರ ಒಂದು ತಿಂಗಳ ಸಂಬಳ ದೇಣಿಗೆ ನೀಡಿದರು.
ಕೋವಿಡ್-19 ಕೊರೊನಾ ವೈರಸ್ ಸೋಂಕು ರೋಗದ ಹತೋಟಿಗಾಗಿ ಬೆಂಗಳೂರು ವಿಶ್ವವಿದ್ಯಾಲಯದ ಶಿಕ್ಷಕ ಹಾಗೂ ಶಿಕ್ಷೇತರ ನೌಕರರ ಒಂದು ದಿನದ ಸಂಬಳದ ಒಟ್ಟು ಮೊತ್ತ ₹ 24,62,879-00 ಮತ್ತು ಕುಲಪತಿ ಪ್ರೊ. ವೇಣುಗೋಪಾಲ್ ಕೆ.ಆರ್. ಅವರ ಒಂದು ತಿಂಗಳಿನ ವೈಯಕ್ತಿಕ ಸಂಬಳ ₹ 1,64,998-00ಗಳನ್ನು ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಲಾಯಿತು.
ಕುಲಪತಿ ಪ್ರೊ. ವೇಣುಗೋಪಾಲ್ ಕೆ.ಆರ್. ಅವರು ಮುಖ್ಯಮಂತ್ರಿಯವರಿಗೆ ಚೆಕ್ಗಳನ್ನು ಸೋಮವಾರ ಹಸ್ತಾಂತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.