ADVERTISEMENT

ಬೆಂಗಳೂರು ವಿ.ವಿ ಘಟಿಕೋತ್ಸವ: ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2022, 19:19 IST
Last Updated 21 ಫೆಬ್ರುವರಿ 2022, 19:19 IST

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ 57ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪದವಿ ಪ್ರಮಾಣ ಪತ್ರ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2021ರ ನವೆಂಬರ್ ಅಥವಾ ಡಿಸೆಂಬರ್‌ವರೆಗಿನ ಪದವಿ ಪರೀಕ್ಷೆಗಳಲ್ಲಿ ಮತ್ತು ಅದಕ್ಕೂ ಪೂರ್ವದ ಅವಧಿಯಲ್ಲಿ ಪದವಿ ಪರೀಕ್ಷೆಗಳಲ್ಲಿ ಉತ್ತೀರ್ಣಗೊಂಡು ಪದವಿ ಪಡೆಯಲು ಅರ್ಹರಾಗಿರುವವರು ಅರ್ಜಿ ಸಲ್ಲಿಸಬಹುದು.

ನಿಗದಿತ ಅರ್ಜಿ ನಮೂನೆಯು www.bangaloreuniversity.ac.in ವೆಬ್‌ಸೈಟ್‌ನಲ್ಲಿ ಹಾಗೂ ವಿಶ್ವವಿದ್ಯಾಲಯದ ವಿಭಾಗಗಳು
ಮತ್ತು ಕಾಲೇಜುಗಳಲ್ಲಿ ಸಹ ಲಭ್ಯವಿದೆ ಎಂದು ಕುಲಸಚಿವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.