ADVERTISEMENT

ದೂರ ಶಿಕ್ಷಣ: ದಿನಾಂಕ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 27 ಮೇ 2019, 20:00 IST
Last Updated 27 ಮೇ 2019, 20:00 IST
   

ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯ ದೂರ ಶಿಕ್ಷಣ ನಿರ್ದೇಶನಾಲಯದ ಬಿ.ಎ, ಬಿ.ಕಾಂ, ಬಿ.ಬಿ.ಎಂ ಪದವಿಯ (ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷ) ಮತ್ತು ಸ್ನಾತಕೋತ್ತರ ಪದವಿಗಳಾದ ಎಂ.ಎ, ಎಂ.ಕಾಂ, ಎಂ.ಎಸ್ಸಿ (ಪ್ರಥಮ ಮತ್ತು ದ್ವಿತೀಯ ವರ್ಷ) ನೋಂದಾಯಿಸಿಕೊಳ್ಳಲು ಇದೇ 31ರವರೆಗೆ ಅವಧಿ ವಿಸ್ತರಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ವಿಳಂಬ ಶುಲ್ಕದೊಂದಿಗೆ ಅರ್ಜಿ ಶುಲ್ಕವನ್ನು (₹1,000), ಪ್ರವೇಶಾತಿ ಶುಲ್ಕದ (ವಿಶ್ವವಿದ್ಯಾಲಯ ಪ್ರತಿ ಕೋರ್ಸ್‍ಗಳಿಗೆ ನಿಗದಿಸಿರುವ ಮೊತ್ತ) ಜೊತೆಗೆ ಪಡೆದು ನೇರವಾಗಿ ನಿರ್ದೇಶನಾಲಯದಲ್ಲಿ ಪ್ರವೇಶಾತಿಯನ್ನು ಪಡೆಯಲು ತಿಳಿಸಲಾಗಿದೆ. ಡಿ.ಡಿ.ಯನ್ನು ವಿತ್ತಾಧಿಕಾರಿಗಳು, ಬೆಂಗಳೂರು ವಿಶ್ವವಿದ್ಯಾಲಯ, ಬೆಂಗಳೂರು, ಇವರ ಹೆಸರಿನಲ್ಲಿ ಪಡೆಯಬೇಕು ಎಂದು ವಿವಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT