ADVERTISEMENT

ಬೆಂಗಳೂರು: ಭೂಮಾಪಕ ಹುದ್ದೆಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2021, 4:12 IST
Last Updated 23 ಆಗಸ್ಟ್ 2021, 4:12 IST

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿರುವ ಭೂಮಿಯ ಮಾಪನ, ಕಂದಾಯ, ಭೂದಾಖಲೆ ಹಾಗೂ ಭೂ ಸಂಬಂಧಿತ ನ್ಯಾಯಾಲಯದಲ್ಲಿರುವ ದಾವೆಗಳ ಕರ್ತವ್ಯ ನಿರ್ವಹಿಸಲು ಪ್ರಥಮ ದರ್ಜೆ ಭೂಮಾಪಕ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯ ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರದಿಂದ ನಿವೃತ್ತಿ ಹೊಂದಿರುವ ಅರ್ಹ, ನುರಿತ ಅಭ್ಯರ್ಥಿಗಳನ್ನು ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ.

ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ ಭೂಮಾಪನ ಕಾಯ್ದೆ, ನಿಯಮಗಳು ಹಾಗೂ ‘ಮೋಜಿಣಿ’, ‘ಭೂಮಿ’ ಹಾಗೂ ಇತರೆ ಭೂ-ಸಂಬಂಧಿತ ಅಂತರ್ಜಾಲದ ತಂತ್ರಾಂಶದ ಹಾಗೂ ಮಾಹಿತಿ ತಂತ್ರಜ್ಞಾನದ ಜ್ಞಾನ ಅವಶ್ಯವಿರಬೇಕು. ಆಸಕ್ತರು, ಭರ್ತಿ ಮಾಡಿದ ಅರ್ಜಿಗಳನ್ನು ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಿಗೆ ತಲುಪಬೇಕು. ಇದೇ 31 ಕೊನೆಯ ದಿನ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಮಾಹಿತಿಗೆ, ವಿಶ್ವವಿದ್ಯಾಲಯದ ಅಧಿಕೃತ ವೆಬ್‌ಸೈಟ್‌ www.bangaloreuniversity.ac.in ಸಂಪರ್ಕಿಸಬಹುದು.

ಐದು ವರ್ಷದ ಕೋರ್ಸ್‌ ಪ್ರವೇಶಕ್ಕೆ ಅರ್ಜಿ ಆಹ್ವಾನ
ದ್ವಿತೀಯ ಪಿಯುಸಿ ನಂತರ ಪದವಿ ಮತ್ತು ಸ್ನಾತಕೋತ್ತರ ಪದವಿಯ ಐದು ವರ್ಷಗಳ ಇಂಟಿಗ್ರೇಟೆಡ್‌ ಕೋರ್ಸ್‌ (ಬಿಎಸ್‌ಸಿ, ಎಂಎಸ್‌ಸಿ –ಜೈವಿಕ ವಿಜ್ಞಾನ) ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಬೆಂಗಳೂರು ವಿಶ್ವವಿದ್ಯಾಲಯವು ಅರ್ಜಿ ಆಹ್ವಾನಿಸಿದೆ.

ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಶೇ 50ಕ್ಕಿಂತ ಹೆಚ್ಚು ಅಂಕ ಗಳಿಸಿದ ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಹಾಗೂಶೇ 45ಕ್ಕಿಂತ ಹೆಚ್ಚು ಅಂಕಗಳಿಸಿದ ಪರಿಶಿಷ್ಟ ಜಾತಿ, ಪಂಗಡ ಹಾಗೂ ಪ್ರವರ್ಗ 1ರ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ಇದೇ 31ರೊಳಗೆ ಅರ್ಜಿ ಸಲ್ಲಿಸಬೇಕು. ₹100 ದಂಡ ಸಹಿತ ಅರ್ಜಿ ಸಲ್ಲಿಸಲು ಸೆ.6 ಕೊನೆಯ ದಿನ.

ಸಾಮಾನ್ಯ ವರ್ಗದವರಿಗೆ ₹200, ಪರಿಶಿಷ್ಟ ಜಾತಿ, ಪಂಗಡ ಹಾಗೂ ಪ್ರವರ್ಗ 1ರ ವಿದ್ಯಾರ್ಥಿಗಳು ₹40 ಅರ್ಜಿ ಶುಲ್ಕ ಪಾವತಿಸಬೇಕು.

ಮಾಹಿತಿಗೆ, 080– 22961521/1923 ಅಥವಾ 87220 48456 ಸಂಖ್ಯೆ ಸಂಪರ್ಕಿಸಬಹುದು.

ಎಲ್‌ಎಲ್‌ಎಂ: ಅರ್ಜಿ ಆಹ್ವಾನ
ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜು ಮತ್ತು ಕಾನೂನು ವಿಭಾಗವು 2021–22ನೇ ಸಾಲಿಗೆ ಎರಡು ವರ್ಷದ ಎಲ್‌ಎಲ್‌ಎಂ ಸ್ನಾತಕೋತ್ತರ ಪದವಿಯ ಮೊದಲ ಸೆಮಿಸ್ಟರ್‌ ಕೋರ್ಸ್‌ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.

ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಮೂರು ಅಥವಾ ಐದು ವರ್ಷದ ಎಲ್‌ಎಲ್‌ಬಿ ಪದವಿಯಲ್ಲಿ ಕನಿಷ್ಠ ಶೇ 45, ಪರಿಶಿಷ್ಟ ಜಾತಿ, ಪಂಗಡ ಹಾಗೂ ಪ್ರವರ್ಗ –1ರ ಅಭ್ಯರ್ಥಿಗಳು ಶೇ 40ರಷ್ಟು ಅಂಕ ಪಡೆದಿರಬೇಕು.

ಸೆ.3 ಅರ್ಜಿ ಸಲ್ಲಿಕೆಗೆ ಕೊನೆಯ ದಿನ. ಮಾಹಿತಿಗೆ, ವಿಶ್ವವಿದ್ಯಾಲಯದ ವೆಬ್‌ಸೈಟ್ www.bangaloreuniversity.ac.in ನೋಡಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.