ಬೆಂಗಳೂರು ನಗರ ವಿಶ್ವವಿದ್ಯಾಲಯ
ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯವೆಂದು ಮರುನಾಮಕರಣ ಮಾಡುತ್ತಿರುವ ಸರ್ಕಾರದ ಕ್ರಮವನ್ನು ಕರ್ನಾಟಕ ವಿಕಾಸ ರಂಗ ಖಂಡಿಸಿದೆ.
‘1858ರಲ್ಲಿ ಬ್ರಿಟಿಷರು ‘ಬೆಂಗಳೂರು ಹೈಸ್ಕೂಲ್’ ಹೆಸರಿನಿಂದ ಪ್ರಾರಂಭಿಸಿದ ಶಾಲೆ, 1964ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯವಾಯಿತು. ಬೆಂಗಳೂರಿಗೆ ತನ್ನದೆಯಾದ ಇತಿಹಾಸ, ಪರಂಪರೆಯಿದೆ. ಜಾಗತಿಕ ಮಟ್ಟದಲ್ಲಿ ತನ್ನ ಹೆಸರಿನಿಂದಲೇ ಮನ್ನಣೆ ಮತ್ತು ಖ್ಯಾತಿ ಪಡೆದಿದೆ. ಹಿಗಾಗಿ, ಈ ನಾಮಕರಣ ಪ್ರಕ್ರಿಯೆಯನ್ನು ಸರ್ಕಾರ ಕೂಡಲೇ ಕೈಬಿಡಬೇಕು’ ಎಂದು ಕರ್ನಾಟಕ ವಿಕಾಸ ರಂಗದ ರಾಜ್ಯಾಧ್ಯಕ್ಷ ವ.ಚ. ಚನ್ನೆಗೌಡ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.