ADVERTISEMENT

ಸಿಐಐ ಜೊತೆ ಬೆಂಗಳೂರು ವಿಶ್ವವಿದ್ಯಾಲಯ ಶೈಕ್ಷಣಿಕ ಒಡಂಬಡಿಕೆ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2025, 19:52 IST
Last Updated 16 ಮಾರ್ಚ್ 2025, 19:52 IST
<div class="paragraphs"><p>ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಸಿಐಐ ಸಂಸ್ಥೆಯ ನಡುವೆ ಶೈಕ್ಷಣಿಕ ಒಡಂಬಡಿಕೆಗೆ ಸಹಿ ಹಾಕಿದ ಪತ್ರವನ್ನು ಜಯಕರ್ ಎಂ.ಎಸ್‌. ಮತ್ತು ಸೌಗತ ರಾಯ್ ಚೌಧರಿ ಪ್ರದರ್ಶಿಸಿದರು</p></div>

ಬೆಂಗಳೂರು ವಿಶ್ವವಿದ್ಯಾಲಯ ಮತ್ತು ಸಿಐಐ ಸಂಸ್ಥೆಯ ನಡುವೆ ಶೈಕ್ಷಣಿಕ ಒಡಂಬಡಿಕೆಗೆ ಸಹಿ ಹಾಕಿದ ಪತ್ರವನ್ನು ಜಯಕರ್ ಎಂ.ಎಸ್‌. ಮತ್ತು ಸೌಗತ ರಾಯ್ ಚೌಧರಿ ಪ್ರದರ್ಶಿಸಿದರು

   

ಬೆಂಗಳೂರು: ‘ಉದ್ಯಮ ವಲಯ ಮತ್ತು ಶಿಕ್ಷಣ ಕ್ಷೇತ್ರದ ನಡುವಿನ ಅಂತರ ಕಡಿಮೆ ಮಾಡಲು ಬೆಂಗಳೂರು ವಿಶ್ವವಿದ್ಯಾಲಯವು ಭಾರತೀಯ ಕೈಗಾರಿಕಾ ಮಹಾ ಒಕ್ಕೂಟದ (ಸಿಐಐ) ಜೊತೆಗೆ
ಒಡಂಬಡಿಕೆಯೊಂದಕ್ಕೆ ಸಹಿ ಹಾಕಿದೆ.

ಈ ಒಡಂಬಡಿಕೆಯ ಭಾಗವಾಗಿ ವಿಶ್ವವಿದ್ಯಾಲಯವು ಪ್ರಸ್ತುತ ಉದ್ಯೋಗ ಮಾರುಕಟ್ಟೆಯ ಅಗತ್ಯಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳನ್ನು ಸಿದ್ಧಪಡಿಸಲು ‘ಉದ್ಯಮ ಆಧಾರಿತ ಸರ್ಟಿಫಿಕೇಟ್ ಕೋರ್ಸ್‌’ಗಳನ್ನು ಆರಂಭಿಸುತ್ತಿದೆ.

ADVERTISEMENT

ಈ ಕೋರ್ಸ್‌ಗಳು ಹಣಕಾಸು, ಅಕೌಂಟ್ಸ್, ಕಾರ್ಪೋರೇಟ್ ಆಡಳಿತ, ಮಾನವ ಸಂಪನ್ಮೂಲ ಸೇರಿದಂತೆ ಉದ್ಯಮ ಕ್ಷೇತ್ರದ ಹಲವು ಪ್ರಮುಖ ವಿಷಯಗಳ ಮೇಲೆ ಕೇಂದ್ರಿಕೃತವಾಗಿರುತ್ತವೆ. ಈ ಕೋರ್ಸ್‌ಗಳಲ್ಲಿ
ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನ ಮತ್ತು ಉದ್ಯೋಗಮುಖಿ ಕೌಶಲ್ಯಗಳ ಕುರಿತು ತರಬೇತಿ ನೀಡಲಾಗುತ್ತದೆ ಎಂದು ವಿಶ್ವ ವಿದ್ಯಾಲಯ ತಿಳಿಸಿದೆ.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕುಲಪತಿ ಜಯಕರ ಎಸ್.ಎಂ, ಕುಲಸಚಿವ ಶೇಕ್ ಲತೀಫ್ ಮತ್ತು ಸಿಐಐ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಸೌಗತ ರಾಯ್ ಚೌಧರಿ ಅವರು ಒಡಂಬಡಿಕೆಗೆ ಸಹಿ ಹಾಕಿದರು‌.

ನಂತರ ಮಾತನಾಡಿದ ಕುಲಪತಿ ಜಯಕರ್, ‘ಉದ್ಯಮ ವಲಯ, ಕೈಗಾರಿಕೆಗಳ ಅಗತ್ಯಕ್ಕೆ ತಕ್ಕಂತೆ ವಿದ್ಯಾರ್ಥಿಗಳನ್ನು ರೂಪಿಸುವ ದೃಷ್ಟಿಯಲ್ಲಿ, ಈ ಒಪ್ಪಂದ ಪ್ರಮುಖ ಹೆಜ್ಜೆಯಾಗಿದೆ. ಶಿಕ್ಷಣ ಮತ್ತು ಔದ್ಯೋಗಿಕ ಕ್ಷೇತ್ರದಲ್ಲಿ ಇದು ಹಲವು ಬದಲಾವಣೆಗಳಿಗೆ ಕಾರಣವಾಗಲಿದೆ’ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕುಲಸಚಿವ (ಮೌಲ್ಯಮಾಪನ) ಶ್ರೀನಿವಾಸ್ ಸಿ. ಕಾನೂನು ನಿಕಾಯದ ಡೀನ್‌ ಪ್ರೊ. ಸುದೇಶ್ ವಿ. ಸೇರಿದಂತೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.