ADVERTISEMENT

ಬೆಂಗಳೂರು ವಿ.ವಿ: ನೂತನ ಕುಲಪತಿ ನೇಮಕ ಪ್ರಕ್ರಿಯೆ ಆರಂಭ

​ಪ್ರಜಾವಾಣಿ ವಾರ್ತೆ
Published 21 ಮೇ 2022, 19:01 IST
Last Updated 21 ಮೇ 2022, 19:01 IST
ಬೆಂಗಳೂರು ವಿ.ವಿ
ಬೆಂಗಳೂರು ವಿ.ವಿ   

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ನೂತನ ಕುಲಪತಿ ನೇಮಕಕ್ಕೆ ಉನ್ನತ ಶಿಕ್ಷಣ ಇಲಾಖೆ ಪ್ರಕ್ರಿಯೆ ಆರಂಭಿಸಿದೆ.

ಹಾಲಿ ಕುಲಪತಿ ಪ್ರೊ. ಕೆ.ಆರ್‌. ವೇಣುಗೋಪಾಲ್‌ ಅವರು ಜೂನ್‌ 12ರಂದು ನಿವೃತ್ತರಾಗಲಿದ್ದಾರೆ. ಹೀಗಾಗಿ, ಉನ್ನತ ಶಿಕ್ಷಣ ಇಲಾಖೆಯು ಕುಲಪತಿ ಹುದ್ದೆಗೆ ಹೊಸಬರ ನೇಮಕಕ್ಕೆ ಶುಕ್ರವಾರ ಪ್ರಕಟಣೆ ಹೊರಡಿಸಿದೆ.

ವಿಶ್ವವಿದ್ಯಾಲಯಗಳಲ್ಲಿ ಕನಿಷ್ಠ 10 ವರ್ಷಗಳ ಸೇವೆ ಸಲ್ಲಿಸಿದ ಅಥವಾ ಸಂಶೋಧನಾ ಅಥವಾ ಶೈಕ್ಷಣಿಕ ಆಡಳಿತ ಸಂಸ್ಥೆಗಳಲ್ಲಿ 10 ವರ್ಷಗಳ ಕಾಲ ಕಾರ್ಯನಿರ್ವಹಿಸಿದ ಅನುಭವ ಹೊಂದಿರಬೇಕು ಎಂಬುದೂ ಸೇರಿದಂತೆ ಹಲವು ಮಾನದಂಡಗಳನ್ನು ಕುಲಪತಿ ಹುದ್ದೆಯ ನೇಮಕಾತಿಗೆ ನಿಗದಿಪಡಿಸಲಾಗಿದೆ.

ADVERTISEMENT

ಹೊಸ ಕುಲಪತಿಯ ಆಯ್ಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸುವ ಶೋಧನಾ ಸಮಿತಿಗೆ ನೃಪತುಂಗ ವಿಶ್ವವಿದ್ಯಾಲಯದ ಪ್ರೊ. ಶ್ರೀನಿವಾಸ್‌ ಎಸ್. ಬಾಲಿ ಅವರನ್ನು ನಾಮನಿರ್ದೇಶನ ಮಾಡಲು ಏಪ್ರಿಲ್‌ 11ರಂದು ನಡೆದ ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸಭೆಯಲ್ಲಿ ನಿರ್ಧರಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.