ADVERTISEMENT

ಸಂಕ್ಷಿಪ್ತ ಸುದ್ದಿ: ‘ಬಾ ಇಲ್ಲಿ ಸಂಭವಿಸು’ ದತ್ತಿ ಪ್ರಶಸ್ತಿ ಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2026, 23:30 IST
Last Updated 11 ಫೆಬ್ರುವರಿ 2026, 23:30 IST
<div class="paragraphs"><p>ಕಡತ</p></div>

ಕಡತ

   

(ಸಾಂದರ್ಭಿಕ ಚಿತ್ರ)

‘ಬಾ ಇಲ್ಲಿ ಸಂಭವಿಸು’ ದತ್ತಿ ಪ್ರಶಸ್ತಿ ಸ್ಥಾಪನೆ

ADVERTISEMENT

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯಲ್ಲಿ ‘ಬಾ ಇಲ್ಲಿ ಸಂಭವಿಸು’ ಶೀರ್ಷಿಕೆಯಡಿ ಕೆ.ಎಲ್. ಲಕ್ಷ್ಮಮ್ಮ ಮತ್ತು ಪ್ರೊ.ಶಿವರಾಮಯ್ಯ ಅವರು ದತ್ತಿ ಪ್ರಶಸ್ತಿ ಸ್ಥಾಪಿಸಿದ್ದಾರೆ.

ಈ ದತ್ತಿ ಪ್ರಶಸ್ತಿಯು ₹25 ಸಾವಿರ ನಗದು ಒಳಗೊಂಡಿದೆ. ಸಾಹಿತಿ ಪ್ರೊ.ಶಿವರಾಮಯ್ಯ ಅವರು ₹5 ಲಕ್ಷ ದತ್ತಿನಿಧಿಯನ್ನು ಅಕಾಡೆಮಿಗೆ ಒದಗಿಸಿದ್ದಾರೆ. 2025ನೇ ಸಾಲಿನ ಪ್ರಶಸ್ತಿಗೆ ಪ್ರತ್ಯೇಕವಾಗಿ ₹25 ಸಾವಿರ ನೀಡಿದ್ದಾರೆ. ಕುವೆಂಪು ಅವರ ಕೃತಿಗಳು ಮತ್ತು ಆಶಯಗಳ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯದ ಯಾವುದೇ ಪ್ರಕಾರದಲ್ಲಿ ರಚನೆಗೊಂಡ ಕೃತಿಯನ್ನು ಪ್ರಶಸ್ತಿಗೆ ಪರಿಗಣಿಸಲಾಗುತ್ತದೆ ಎಂದು ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ತಿಳಿಸಿದ್ದಾರೆ. 

ಜಲಮಂಡಳಿ ಫೋನ್‌–ಇನ್‌ ನಾಳೆ

ಬೆಂಗಳೂರು: ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅಧ್ಯಕ್ಷತೆಯಲ್ಲಿ
ಫೆಬ್ರವರಿ 13ರ ಬೆಳಿಗ್ಗೆ 9.30ರಿಂದ 10.30ರವರೆಗೆ ನೇರ ಫೋನ್-ಇನ್ ಕಾರ್ಯಕ್ರಮ ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ವಲಯ/ಪ್ರದೇಶಗಳಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಒಳಚರಂಡಿ ಕೊಳವೆ/ಇಳಿ ಗುಂಡಿಯಿಂದ ತ್ಯಾಜ್ಯ ನೀರು ಹೊರಬರುತ್ತಿರುವ ಬಗ್ಗೆ, ಜಲಮಾಪನ ಹಾಗೂ ನೀರಿನ ಬಿಲ್ಲಿನ ಸಮಸ್ಯೆಯ ಬಗ್ಗೆ ನೇರವಾಗಿ ಮಾತನಾಡಿ ಕುಂದು-ಕೊರತೆಗಳನ್ನು ಬಗೆಹರಿಸಿಕೊಳ್ಳಬಹುದು.

ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆ; 080-22945119, 080-22229639. ನೀರಿನ ಸಂಪರ್ಕ ಹೊಂದಿರುವ ಗ್ರಾಹಕರು ಆರ್.ಆರ್.ಸಂಖ್ಯೆಯನ್ನು ತಿಳಿಸಿ ದೂರು ನೀಡಲು ಕೋರಲಾಗಿದೆ.