ಸಾಂದರ್ಭಿಕ ಚಿತ್ರ
ಬೆಂಗಳೂರು: ಮೆಜೆಸ್ಟಿಕ್ ಬಳಿಯ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಗುರುವಾರ ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಮೈಸೂರಿನ ಕಂಪನಿಯೊಂದರ ಉದ್ಯೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಶ್ಚಿಮ ಬಂಗಾಳ ರಾಜ್ಯದ ಕೂಚ್ ಬಿಹಾರಿ ಜಿಲ್ಲೆಯ ಮೌಲಾರಿ ಗ್ರಾಮದ ಸುಶಾಂತ್ (40) ಆತ್ಮಹತ್ಯೆ ಮಾಡಿಕೊಂಡವರು.
‘ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ಒಡೆಯರ್ ಎಕ್ಸ್‌ಪ್ರೆಸ್‌ಗೆ ಅವರು ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಶಾಂತ್ ಅವರು ಮೈಸೂರಿನ ರಿಶಿ ಕಂಪನಿಯಲ್ಲಿ ಉಸ್ತುವಾರಿಯಾಗಿ ಕೆಲಸ ಮಾಡುತ್ತಿದ್ದರು ಎಂದು ಗೊತ್ತಾಗಿದೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ’ ಎಂದು ರೈಲ್ವೆ ಪೊಲೀಸರು ತಿಳಿಸಿದರು.
‘ಮರಣೋತ್ತರ ಪರೀಕ್ಷೆ ನಡೆಸಲು ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸುಶಾಂತ್ ಅವರು ಕೆಲಸ ಮಾಡುತ್ತಿದ್ದ ಕಂಪನಿಗೂ ಮಾಹಿತಿ ನೀಡಲಾಗಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.