ADVERTISEMENT

ಚಂದ್ರಶೇಖರ್‌ ಕೊಲೆ ಪ್ರಕರಣ: ಸಿಐಡಿ ತನಿಖೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2022, 6:32 IST
Last Updated 10 ಏಪ್ರಿಲ್ 2022, 6:32 IST
ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ    

ಬೆಂಗಳೂರು: ಜಗಜೀವನ್‌ ರಾಂ ನಗರದಲ್ಲಿ ಇತ್ತೀಚೆಗೆ ನಡೆದ ಚಂದ್ರಶೇಖರ್‌ ಎಂಬ ಯುವಕನ ಕೊಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ಆದೇಶ ಹೊರಡಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಈ ಕುರಿತು ಭಾನುವಾರ ಹೇಳಿಕೆ ನೀಡಿರುವ ಅವರು, ಯುವಕನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಯಬೇಕು. ಸತ್ಯವನ್ನು ಬಯಲಿಗೆಳೆದು, ಹಂತತಕರನ್ನು ಶಿಕ್ಷೆಗೆ ಒಳಪಡಿಸಬೇಕು ಎಂಬ ಉದ್ದೇಶದಿಂದ ಸಿಐಡಿ ತನಿಖೆಗೆ ಆದೇಶ ಹೊರಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮೊದಲು ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಚಂದ್ರಶೇಖರ್‌ ಕೊಲೆ ಪ್ರಕರಣದಲ್ಲಿ ಸತ್ಯ ಹೊರಗೆ ತರಬೇಕಿದೆ. ಈ ಕಾರಣದಿಂದ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾಯಿಸುವಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕರು ಮತ್ತು ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಅವರಿಗೆ ನಿರ್ದೇಶನ ನೀಡಲಾಗಿದೆ. ಶೀಘ್ರದಲ್ಲೇ ಆದೇಶ ಹೊರಬೀಳಲಿದೆ ಎಂದಿದ್ದರು.

ADVERTISEMENT

ಈ ಪ್ರಕರಣದ ತನಿಖೆ ಕುರಿತು ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿರುವ ಕುರಿತು ಕೇಳಿದಾಗ, 'ಯಾರು ವಾಗ್ದಾಳಿ ನಡೆಸುತ್ತಾರೆ, ಟೀಕಿಸುತ್ತಾರೆ ಎಂಬುದು ಮುಖ್ಯ ಅಲ್ಲ. ನಿಷ್ಪಕ್ಷಪಾತ ತನಿಖೆ ನಡೆಸಿ, ಸತ್ಯ ಹೊರ ತರುವುದು ನಮಗೆ ಮುಖ್ಯ' ಎಂದು ಮುಖ್ಯಮಂತ್ರಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.