ADVERTISEMENT

ಅಕ್ರಮ ವಾಸ; ಬಾಂಗ್ಲಾ ಪ್ರಜೆ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 30 ಜುಲೈ 2019, 19:05 IST
Last Updated 30 ಜುಲೈ 2019, 19:05 IST

ಬೆಂಗಳೂರು: ದೇಶದೊಳಗೆ ಅಕ್ರಮವಾಗಿ ನುಸುಳಿ, ನಕಲಿ ದಾಖಲೆಗಳನ್ನು ಬಳಸಿಕೊಂಡು ಸ್ಥಳೀಯ ಗುರುತಿನ ಚೀಟಿಗಳನ್ನು ಪಡೆದಿದ್ದ ಬಾಂಗ್ಲಾದೇಶದ ಸೋಯೆಲ್ ಶೇಖ್ (26) ಎಂಬಾತನನ್ನು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ವಲಸೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಭಾರತೀಯ ಪಾಸ್‌ಪೋರ್ಟ್‌ ಬಳಸಿಕೊಂಡು ನಗರದಿಂದ ಮಲೇಷಿಯಾಕ್ಕೆ ಹೊರಟಿದ್ದ ಸೋಯೆಲ್‌ನನ್ನು ನಿಲ್ದಾಣದಲ್ಲೇ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದರು. ಆತನ ದಾಖಲೆಗಳು ನಕಲಿ ಎಂಬುದು ಗೊತ್ತಾಗುತ್ತಿದ್ದಂತೆ ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಿದ್ದಾರೆ.

‘2012ರಲ್ಲಿ ದೇಶದೊಳಗೆ ನುಸಳಿದ್ದ ಆರೋಪಿ,ಪಶ್ಚಿಮ ಬಂಗಾಳದ ಬಾಡಿಗೆ ಮನೆಯಲ್ಲಿ ನೆಲೆಸಿದ್ದ. ಅದೇ ವಿಳಾಸ ಬಳಸಿಕೊಂಡು ಆಧಾರ್ ಹಾಗೂ ಪಾನ್ ಕಾರ್ಡ್ ಮಾಡಿಸಿಕೊಂಡಿದ್ದ. ಅದೇ ದಾಖಲೆ ಮೂಲಕ ಭಾರತೀಯ ಪಾಸ್‌ಪೋರ್ಟ್‌ ಸಹ ಪಡೆದಿದ್ದ’ ಎಂದು ಪೊಲೀಸರು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.