ನೆಲಮಂಗಲ: ಪಟ್ಟಣದ ಖಾಸಗಿ ಬ್ಯಾಂಕ್ ಉದ್ಯೋಗಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಶುಕ್ರವಾರ ರಾತ್ರಿ 9 ಗಂಟೆಗೆ ಸುಮಾರಿಗೆ ನಡೆದಿದೆ. ಗೊಲ್ಲಹಳ್ಳಿ ಗ್ರಾಮದ ದರ್ಶನ್ (25) ಕೊಲೆಯಾದವರು.
ಶುಕ್ರವಾರ ಮನೆಯಲ್ಲೇ ಇದ್ದ ದರ್ಶನ್ ಅವರು ರಾತ್ರಿ 7.30ರ ಸುಮಾರಿಗೆ ಮನೆಯಿಂದ ಹೊರಗೆ ಹೋಗಿದ್ದರು. ಈ ಸಮಯದಲ್ಲಿ ಆರೋಪಿಗಳ ಜತೆಗೆ ಮಾತಿನ ಚಕಮಕಿ ನಡೆದು ಕೊಲೆ ಆಗಿದೆ ಎಂದು ಶಂಕಿಸಲಾಗಿದೆ.
ಗೊಲ್ಲಹಳ್ಳಿ ಗ್ರಾಮದ ವೇಣುಗೋಪಾಲ್ ಎಂಬಾತ ಕೃತ್ಯ ಎಸಗಿರುವ ಶಂಕೆಯಿದ್ದು, ಆತ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.
ಪ್ರೇಮದ ವಿಚಾರಕ್ಕೆ ಕೊಲೆ ನಡೆದಿದೆ ಎಂಬುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು. ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.