ADVERTISEMENT

ಬೆಂಗಳೂರು |ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿ: ಬ್ಯಾಂಕ್ ಉದ್ಯೋಗಿ ಯೋಗೇಶ್ವರಿ ಸಾವು

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2026, 13:53 IST
Last Updated 17 ಫೆಬ್ರುವರಿ 2026, 13:53 IST
<div class="paragraphs"><p>ಯೋಗೇಶ್ವರಿ</p></div>

ಯೋಗೇಶ್ವರಿ

   

ಬೆಂಗಳೂರು: ರಸ್ತೆ ದಾಟುವ ವೇಳೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಖಾಸಗಿ ಬ್ಯಾಂಕ್‌ನ ಮಹಿಳಾ ಉದ್ಯೋಗಿ ಮೃತಪಟ್ಟ ಘಟನೆ ರಾಜಾಜಿನಗರದಲ್ಲಿ ನಡೆದಿದೆ.

ಲಗ್ಗೆರೆ ಸಮೀಪದ ಕೆಂಪೇಗೌಡ ಲೇಔಟ್‌ನ ನಿವಾಸಿ ಯೋಗೇಶ್ವರಿ (27) ಮೃತ ಯುವತಿ. ಘಟನೆಯಲ್ಲಿ ಬೈಕ್ ಸವಾರ ದೀಪಕ್ ಸಹ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ‌ ಪಡೆಯುತ್ತಿದ್ದಾರೆ. ಅಪಘಾತದ ದೃಶ್ಯ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದೆ.

ADVERTISEMENT

ರಾಜಾಜಿನಗರದ ಡಾ.ರಾಜ್‌ಕುಮಾರ್ ರಸ್ತೆಯಲ್ಲಿರುವ ಬ್ಯಾಂಕ್‌ವೊಂದರಲ್ಲಿ ಯೋಗೇಶ್ವರಿ ಉದ್ಯೋಗಿಯಾಗಿದ್ದರು. ಸೋಮವಾರ ಮಧ್ಯಾಹ್ನ ಬ್ಯಾಂಕ್ ಸಮೀಪದಲ್ಲೇ ಇದ್ದ ಕ್ಯಾಂಟೀನ್‌ವೊಂದರಿಂದ ಊಟ ತೆಗೆದುಕೊಂಡು ಬರಲು ರಸ್ತೆ ದಾಟುತ್ತಿದ್ದರು. ಈ ಸಂದರ್ಭದಲ್ಲಿ ಅತಿ ವೇಗವಾಗಿ ಬಂದ ಬೈಕ್ ಸವಾರ, ನಿಯಂತ್ರಣ ತಪ್ಪಿ ಯೋಗೇಶ್ವರಿಗೆ ಡಿಕ್ಕಿ ಹೊಡೆದಿದ್ದು ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ, ಅವರು ಚಿಕಿತ್ಸೆಗೆ ಸ್ಪಂದಿಸಲಿಲ್ಲ. ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಘಟನಾ ಸ್ಥಳಕ್ಕೆ ರಾಜಾಜಿನಗರ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.