ಪ್ರಾತಿನಿಧಿಕ ಚಿತ್ರ
– ಪ್ರಜಾವಾಣಿ ಚಿತ್ರ
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ತಿಂಗಳ ಎಲ್ಲ ಶನಿವಾರ ರಜೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇದೇ 27ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ತಿಳಿಸಿದೆ.
ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೂನಿಯನ್ಸ್‌ನ ಪ್ರಧಾನ ಕಾರ್ಯದರ್ಶಿ ಗಿರಿರಾಜ್ ಕೆ.ಎನ್., ‘ಷೇರುಪೇಟೆ, ವಿದೇಶಿ ವಿನಿಮಯದ ವ್ಯವಹಾರಗಳು ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಕಾರ್ಯನಿರ್ವಹಿಸುತ್ತಿವೆ. ಆದ್ದರಿಂದ ಬ್ಯಾಂಕ್‌ಗಳಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ತಿಂಗಳ ಎಲ್ಲ ಶನಿವಾರವೂ ರಜೆ ನೀಡಬೇಕು. ಬಹುತೇಕ ಎಲ್ಲ ಬ್ಯಾಂಕ್‌ಗಳಲ್ಲಿ ಆನ್‌ಲೈನ್ ಸೇವೆ ಲಭ್ಯ ಇರುವುದರಿಂದ ಗ್ರಾಹಕರಿಗೆ ಯಾವುದೇ ರೀತಿಯ ತೊಂದರೆ ಆಗುವುದಿಲ್ಲ’ ಎಂದು ಮಾಹಿತಿ ನೀಡಿದರು.
ಯೂನಿಯನ್ಸ್‌ನ ಸದಸ್ಯರಾದ ಶಿವರಜ್, ಜೈರಾಜ್, ರವಿಕುಮಾರ್, ಚಂದ್ರು, ಭಾರತಿ ಸುದ್ದಿಗೋಷ್ಠಿಯಲ್ಲಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.