ಬೆಂಗಳೂರು: ನಿಷೇಧಿತ ನೋಟುಗಳ ಚಲಾವಣೆ ದಂಧೆಯಲ್ಲಿ ತೊಡಗಿದ್ದ ಆರೋಪದಡಿ ಇಬ್ಬರನ್ನು ಪೀಣ್ಯ ಪೊಲೀಸರು ಬಂಧಿಸಿದ್ದಾರೆ.
ಶಿವಕುಮಾರ್ (44), ವಿಜಯ ಕುಮಾರ್ (40) ಬಂಧಿತರು. ಯೋಗೇಶ್ ಎಂಬಾತ ತಲೆಮರೆಸಿಕೊಂಡಿದ್ದಾನೆ.
ಜಾಲಹಳ್ಳಿ ಕ್ರಾಸ್ ಬಳಿ ಕಾರಿನಲ್ಲಿ ಬಂದು, ನಿಷೇಧಗೊಂಡಿರುವ ₹1.88 ಕೋಟಿ ಹಣ ವಿನಿಮಯ ಮಾಡಲು ಆರೋಪಿಗಳು ಯತ್ನಿಸಿದ್ದರು. ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ.
ಹಳೆಯ ನೋಟುಗಳನ್ನು ವಿದೇಶಕ್ಕೆ ಸಾಗಿಸಲು ಆರೋಪಿಗಳು ಯತ್ನಿಸುತ್ತಿದ್ದರು. ವಿದೇಶದಲ್ಲಿ ಭಾರತದ ಕರೆನ್ಸಿ ಚಲಾವಣೆಯ ಜಾಲ ಇರುವುದು ವಿಚಾರಣೆ ವೇಳೆ ಪತ್ತೆಯಾಗಿದೆ. ಬಂಧಿತರಿಂದ ಹಣ ಹಾಗೂ ಕೃತ್ಯಕ್ಕೆ ಬಳಸುತ್ತಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.