ಸಾವು (ಪ್ರಾತಿನಿಧಿಕ ಚಿತ್ರ)
ಆನೇಕಲ್: ಪತ್ನಿ, ಮಕ್ಕಳೊಂದಿಗೆ ಶನಿವಾರ ಬನ್ನೇರುಘಟ್ಟ ಸಫಾರಿಗೆ ಬಂದಿದ್ದ ಬೆಂಗಳೂರಿನ ನಾಗರಭಾವಿಯ ನಂಜಪ್ಪ(45) ಸಫಾರಿ ಬಸ್ಸಿನಲ್ಲಿಯೇ ಪ್ರಜ್ಞೆ ತಪ್ಪಿ ಬಿದ್ದು ಮೃತಪಟ್ಟಿದ್ದಾರೆ.
ನಂಜಪ್ಪ ತಮ್ಮ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಬನ್ನೇರುಘಟ್ಟ ಸಫಾರಿ ಬಸ್ಸಿನಲ್ಲಿ ಪ್ರಜ್ಞೆ ತಪ್ಪಿದರು. ಮೃಗಾಲಯ ಆಂಬುಲೆನ್ಸ್ ನಲ್ಲಿ ಹತ್ತಿರದ ಆಸ್ಪತ್ರೆಗೆ ಪ್ರಥಮ ಚಿಕಿತ್ಸೆಗೆಂದು ಕರೆದೊಯ್ಯ ಲಾಯಿತು. ನಂಜಪ್ಪ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು. ಸಾವಿಗೆ ನಿಖರ ಕಾರಣ ಇನ್ನೂ ಗೊತ್ತಾಗಿಲ್ಲ.
ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ಬನ್ನೇರುಘಟ್ಟ ಉದ್ಯಾನ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.