ADVERTISEMENT

ಸರ್ಕಾರದಿಂದಲೇ ಸರ್ಕಾರಿ ಶಾಲೆ ದುರ್ಬಲ: ಬರಗೂರು

​ಪ್ರಜಾವಾಣಿ ವಾರ್ತೆ
Published 12 ಜೂನ್ 2019, 19:00 IST
Last Updated 12 ಜೂನ್ 2019, 19:00 IST

ಬೆಂಗಳೂರು: ವಿಶ್ವವಿದ್ಯಾಲಯಗಳು ವಿವಾದಾಲಯಗಳಾಗಿ ಪರಿವರ್ತಿತವಾಗಿವೆ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ಬೇಸರ ವ್ಯಕ್ತ ಪಡಿಸಿದರು.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಆಯೋಜಿಸಿದ್ದ ನಿವೃತ್ತ ಕುಲಸಚಿವ ಡಾ.ಸುಂದರರಾಜ್ ಅರಸ್ ಅವರಿಗೆ ಅಭಿನಂದನೆ ಹಾಗೂ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸುಸಂಸ್ಕೃತ ಹಾಗೂ ವಿದ್ಯಾವಂತ ಸಮಾಜಕ್ಕೆ ಅಡಿಪಾಯ ಹಾಕಬೇಕಿದ್ದ ವಿಶ್ವವಿದ್ಯಾಲಯಗಳು ಇಂದು ವಿವಾದಗಳನ್ನು ಹುಟ್ಟು ಹಾಕುವ ಸಂಸ್ಥೆಗಳಾಗಿ ರೂಪುಗೊಂಡಿವೆ. ಸಲ್ಲದ ವಿಷಯಗಳನ್ನು ಚರ್ಚಿಸುವ, ಸಮಾಜದ ಶಾಂತಿ ಕದಡುವ ಕೃತ್ಯಗಳಿಗೆ ಪ್ರೇರೇಪಣೆ ನೀಡುವ ಕೇಂದ್ರಗಳಾಗಿ ಬದಲಾಗಿವೆ ಎಂದು ಬೇಸರ ವ್ಯಕ್ತಪಡಿಸಿದರು.

ADVERTISEMENT

ಸರ್ಕಾರಿ ಶಾಲೆಗಳನ್ನು ದುರ್ಬಲಗೊಳಿಸುವ ಕಾರ್ಯಕ್ಕೆ ಸರ್ಕಾರವೇ ಮುಂದಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದರು.

ಕನಸಿಗೆ ಮಿತಿ ಹಾಕಿಕೊಳ್ಳದೆ ದೊರೆತ ಅವಕಾಶವನ್ನು ಸದ್ಬಳಕೆ ಮಾಡಿಕೊಂಡಾಗ ಮಾತ್ರ ಯಶಸ್ಸು ನಮ್ಮದಾಗುತ್ತದೆ ಎಂದು ರಾಜ್ಯಸಭಾ ಸದಸ್ಯ ಎಲ್.ಹನುಮಂತಯ್ಯ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.