ADVERTISEMENT

ಎಸ್‌.ಜಿ. ಸಿದ್ಧರಾಮಯ್ಯಗೆ ಬಸವ ಪ್ರತಿಷ್ಠಾನ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2021, 21:59 IST
Last Updated 15 ಡಿಸೆಂಬರ್ 2021, 21:59 IST
ಪ್ರೊ.ಎಸ್‌.ಜಿ. ಸಿದ್ಧರಾಮಯ್ಯ
ಪ್ರೊ.ಎಸ್‌.ಜಿ. ಸಿದ್ಧರಾಮಯ್ಯ   

ಬೆಂಗಳೂರು: ಲಂಡನ್‌ನ ಬಸವ ಅಂತರರಾಷ್ಟ್ರೀಯ ಪ್ರತಿಷ್ಠಾನ ನೀಡುವ ‘ಡಾ.ಎಂ.ಎಂ.ಕಲಬುರ್ಗಿ ಪ್ರಗತಿಪರ ಚಿಂತಕ ಪ್ರಶಸ್ತಿ’ಗೆ ಸಾಹಿತಿ ಪ್ರೊ.ಎಸ್.ಜಿ. ಸಿದ್ಧರಾಮಯ್ಯ ಆಯ್ಕೆಯಾಗಿದ್ದಾರೆ.

ಜಾನಪದ ವಿದ್ವಾಂಸ ಗೊ.ರು. ಚನ್ನಬಸಪ್ಪ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ಮೂಢನಂಬಿಕೆ ಮತ್ತು ಮೌಢ್ಯತೆ ವಿರುದ್ಧ ಕೆಲಸ ಮಾಡುತ್ತಿರುವವರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಪ್ರಶಸ್ತಿಯು ₹ 25 ಸಾವಿರ ನಗದು, ತಾಮ್ರ‍‍ಪತ್ರ ಒಳಗೊಂಡಿದೆ.

ಇದೇ 27ರಂದು ನಗರದ ಚಿತ್ರಕಲಾ ಪರಿಷತ್ತಿನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಚಿತ್ರಕಲಾ ಪರಿಷತ್ತಿನ ಅಧ್ಯಕ್ಷ ಬಿ.ಎಲ್. ಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರತಿಷ್ಠಾನದ ಅಧ್ಯಕ್ಷ ಎಸ್. ಮಹಾದೇವಯ್ಯ ಉಪಸ್ಥಿತರಿರುತ್ತಾರೆ. ವಿಮರ್ಶಕಿ ಪ್ರೊ.ಎಂ.ಎಸ್. ಆಶಾದೇವಿ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಾರೆ ಎಂದು ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ಕೆ.ವಿ.ನಾಗರಾಜ ಮೂರ್ತಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.