ಕೆ.ಆರ್.ಪುರ: ‘ಜಗಜ್ಯೋತಿ ಬಸವೇಶ್ವರರು ವಚನಗಳ ಮೂಲಕ ಸಮಾಜದಲ್ಲಿ ಬೇರೂರಿದ ಜಾತಿ ವ್ಯವಸ್ಥೆ, ಮೂಢನಂಬಿಕೆ ಹಾಗೂ ಅನಿಷ್ಠ ಪದ್ಧತಿಗಳನ್ನು ಹೋಗಲಾಡಿಸಿದರು’ ಎಂದು ಭೀಮವಾದ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಬಿ.ಎನ್.ವೆಂಕಟೇಶ್ ಹೇಳಿದರು.
ಕಾಡುಗೋಡಿ ಸಮೀಪದ ಚನ್ನಸಂದ್ರದಲ್ಲಿ ಭೀಮವಾದ ದಲಿತ ಸಂಘರ್ಷ ಸಮಿತಿ ವತಿಯಿಂದ ವಿಶ್ವಗುರು ಬವಸವಣ್ಣನವರ ಜಯಂತಿ ಪ್ರಯುಕ್ತ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಡಾ.ಬಿ.ಆರ್.ಅಂಬೇಡ್ಕರ್ ಅವರು ಪ್ರತಿಯೊಂದು ಸಮುದಾಯಕ್ಕೆ ಸಂವಿಧಾನದಲ್ಲಿ ಮೀಸಲಾತಿ ಕಲ್ಪಿಸುವ ಮೂಲಕ ಸಮಾನ ಅವಕಾಶ ದಕ್ಕಿಸಿಕೊಟ್ಟಿದ್ದಾರೆ. ಜಗಜ್ಯೋತಿ ಬಸವಣ್ಣ ಹಾಗೂ ಡಾ.ಬಿಆರ್ ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ನಮ್ಮ ಜೀವನದಲ್ಲಿ ಆಳವಡಿಸಿಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗೋಣ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಿ.ಸಿದ್ದರಾಜು, ಕೆ.ಕುಮಾರ್, ಸೊಣ್ಣೆಗೌಡ, ಮಹಾದೇವ, ವೈ.ರಾಜಣ್ಣ, ಎಸ್.ಬಾಬು, ಕೆ.ವೈ.ದಿವ್ಯ, ಎಂ.ಮಂಜುನಾಥ್, ಜಿ.ಆರ್.ವೆಂಕಟೇಶ್, ಕರುಣಾಕರನ್ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.