ADVERTISEMENT

ಮೆರವಣಿಗೆಗೆ ಚಪ್ಪಲಿ ಪ್ರದರ್ಶನ

ಬಸವಧರ್ಮ ಪೀಠದ ಕಲ್ಯಾಣ ಪರ್ವ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 13 ಅಕ್ಟೋಬರ್ 2019, 20:13 IST
Last Updated 13 ಅಕ್ಟೋಬರ್ 2019, 20:13 IST
ಬಸವಕಲ್ಯಾಣದಲ್ಲಿ ಭಾನುವಾರ ನಡೆದ ಕಲ್ಯಾಣಪರ್ವದ ಮೆರವಣಿಗೆಯಲ್ಲಿ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಪಾಲ್ಗೊಂಡಿದ್ದರು
ಬಸವಕಲ್ಯಾಣದಲ್ಲಿ ಭಾನುವಾರ ನಡೆದ ಕಲ್ಯಾಣಪರ್ವದ ಮೆರವಣಿಗೆಯಲ್ಲಿ ಬಸವಧರ್ಮ ಪೀಠಾಧ್ಯಕ್ಷೆ ಮಾತೆ ಗಂಗಾದೇವಿ ಪಾಲ್ಗೊಂಡಿದ್ದರು   

ಬಸವಕಲ್ಯಾಣ (ಬೀದರ್‌ ಜಿಲ್ಲೆ): ಬಸವಧರ್ಮ ಪೀಠದಿಂದ ಹಮ್ಮಿಕೊಂಡಿದ್ದ18ನೇ ಕಲ್ಯಾಣ ಪರ್ವದ ಸಮಾರೋಪ ಸಮಾರಂಭದ ಪ್ರಯುಕ್ತ ಭಾನುವಾರ ಆಯೋಜಿಸಿದ್ದ ಮೆರವಣಿಗೆಗೆ ಕೆಲವರು ಚಪ್ಪಲಿ ಪ್ರದರ್ಶಿಸಿದರು.

‘ಮಾತೆ ಮಹಾದೇವಿಯವರು ಬಸವಣ್ಣನವರ ವಚನ ತಿರುಚಿದ ಪುಸ್ತಕಗಳನ್ನು ಈ ಕಲ್ಯಾಣ ಪರ್ವದಲ್ಲಿ ಮಾರಾಟ ಮಾಡಲಾಗುತ್ತಿದೆ’ ಎಂದುಬಸವೇಶ್ವರ ದೇವಸ್ಥಾನ ಸಮಿತಿಯವರು ಮೆರವಣಿಗೆ ವಿರೋಧಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಕೆಲವರುಚಪ್ಪಲಿ ಪ್ರದರ್ಶಿಸಿದರು.

‘ಕಲ್ಯಾಣ ಪರ್ವದ ಮೆರವಣಿಗೆಯಲ್ಲಿ ಬಸವಣ್ಣ ಹಾಗೂ ಇತರೆ ಶರಣರ ಭಾವಚಿತ್ರ ಹೊತ್ತ ಸಮಾಜದವರು, ವೇಷಧಾರಿಗಳು, ಸ್ವಾಮೀಜಿ ಪಾಲ್ಗೊಂಡಿದ್ದರು. ಈ ವೇಳೆ ಬಸವೇಶ್ವರ ದೇವಸ್ಥಾನ ಸಮಿತಿಯವರು ಚಪ್ಪಲಿ ಪ್ರದರ್ಶಿಸಿ ಅವಮಾನ ಮಾಡಿದ್ದಾರೆ’ ಎಂದುರಾಷ್ಟ್ರೀಯ ಬಸವದಳದ ರಾಷ್ಟ್ರೀಯ ಘಟಕದ ಅಧ್ಯಕ್ಷ ಬಸವರಾಜ ಧನ್ನೂರ ದೂರಿದರು.

ADVERTISEMENT

‘ಮಾತೆ ಮಹಾದೇವಿಯವರು ಬಸವಣ್ಣನವರ ವಚನ ತಿರುಚಿದ ವಿವಾದ ಮುಗಿದ ಅಧ್ಯಾಯ. ಈ ವಿವಾದ ಮುಂದಿ
ರಿಸಿಕೊಂಡು ಪ್ರತಿಭಟನೆ ನಡೆಸಿ, ಚಪ್ಪಲಿ ಪ್ರದರ್ಶಿಸಿದ್ದು ಸರಿಯಲ್ಲ. ಅವರು ಈ ಕೂಡಲೇ ಬಹಿರಂಗ ಕ್ಷಮೆ ಕೇಳ
ಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ತೀವ್ರವಾಗಿ ಪ್ರತಿಭಟಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಬಸವಕಲ್ಯಾಣದಲ್ಲಿನ ನೂತನ ಅನುಭವ ಮಂಟಪಕ್ಕೆ ಕೇಂದ್ರ ಸರ್ಕಾರ ₹1000 ಕೋಟಿ ಒದಗಿಸಬೇಕು. ಲಿಂಗಾಯತ ಧರ್ಮ ಮಾನ್ಯತೆಗೆ ರಾಜ್ಯ ಸರ್ಕಾರ ಈಗಾಗಲೇ ಶಿಫಾರಸು ಮಾಡಿದ್ದು ಕೇಂದ್ರ ಸರ್ಕಾರ ಮಾನ್ಯ ಮಾಡಬೇಕು. ಬಸವ ಕಲ್ಯಾಣದಿಂದ ರೈಲು ಆರಂಭಿಸಬೇಕು ಎಂಬುದು ಸೇರಿದಂತೆ ಆರು ನಿರ್ಣಯಗಳನ್ನು ಕಲ್ಯಾಣ ಪರ್ವದ ಸಮಾರೋಪ ಸಮಾರಂಭದಲ್ಲಿ ಅಂಗೀಕರಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.