ಬೆಂಗಳೂರು: ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆಮಾಹಿತಿ ನೀಡಿದರು.
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿದೇಶದಲ್ಲಿ ಪ್ರತಿಭಟನೆ ಕಿಚ್ಚು ಹೆಚ್ಚಾಗಿದ್ದು, ರಾಜ್ಯಗಳ ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಗೃಹ ಸಚಿವ ಅಮಿತ್ ಶಾ ಅವರುಗುರುವಾರ ಸಂಜೆ ತುರ್ತು ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಗೃಹ ಖಾತೆ ರಾಜ್ಯ ಸಚಿವ ಜಿ ಕಿಶನ್ ರೆಡ್ಡಿ, ಗೃಹ ಇಲಾಖೆ ಕಾರ್ಯದರ್ಶಿ ಅಜಯ್ ಕುಮಾರ್ ಇದ್ದರು.
ಈ ಬಗ್ಗೆ ಮಾಧ್ಯಮ ಪ್ರತಿನಿಧಿಗೆ ಫೋನ್ ಮೂಲಕ ವಿವರಿಸಿದ ಬಸವರಾಜ ಬೊಮ್ಮಾಯಿ,‘ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ವಿವಿಧ ಧಾರ್ಮಿಕ ಮುಖಂಡರ ಜೊತೆ ಸಭೆ ನಡೆಸಿದ್ದೇವೆ. ಎಲ್ಲಾ ಮುಖಂಡರು ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ’ ಎಂದು ಹೇಳಿದರು.
‘ಕಾನೂನುಹಾಗೂಸುವ್ಯವಸ್ಥೆಕಾಪಾಡಲುರಾಜ್ಯ ಸರ್ಕಾರ ಸಮರ್ಥವಾಗಿದೆ. ಅಗತ್ಯವಿರುವ ಕಡೆಗಳಿಗೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಹಾಗೂ ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಶಾಂತಿ ಕಾಪಾಡಲು ಎಲ್ಲರೂ ಸಹಕರಿಸಬೇಕು. ಈ ವಿಚಾರದಲ್ಲಿ ರಾಜಕೀಯ ಬೆರೆಸಬಾರದು’ ಎಂದು ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.