ಬೆಂಗಳೂರು: ಎಂಟು ಬಾರಿ ನಿರಂತರವಾಗಿ ಶಿಕ್ಷಕರ ಮತಕ್ಷೇತ್ರದಿಂದ ಆಯ್ಕೆಯಾಗಿ 45 ವರ್ಷದ ದಾಖಲೆ ಪೂರೈಸಿರುವ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿದ್ದ ಶಿಕ್ಷಕರು, ಶಿಕ್ಷಕರ ಸಂಘದ ಪ್ರತಿನಿಧಿಗಳು ಗೌರವಿಸಿದರು.
1980 ಜೂನ್ 30ರಂದು ಬಸವರಾಜ ಹೊರಟ್ಟಿ ಅವರು ಪ್ರಥಮ ಬಾರಿಗೆ ವಿಧಾನ ಪರಿಷತ್ ಸದಸ್ಯರಾದರು. ಅಂದಿನಿಂದ ಸತತವಾಗಿ ಮೇಲ್ಮನೆ ಸದಸ್ಯರಾಗಿರುವ ಅವರು, ಶಿಕ್ಷಕರು ಹಾಗೂ ಸಾರ್ವಜನಿಕರ ಗಟ್ಟಿ ಧ್ವನಿಯಾಗಿ ಇತಿಹಾಸ ಸೃಷ್ಟಿಸಿದ್ದಾರೆ ಎಂದು ಶ್ಲಾಘಿಸಿದರು. ಬೆಳಗಾವಿ, ಬಾಗಲಕೋಟೆಯಿಂದ ಬಂದಿದ್ದ ರೈತರು, ರಾಜ್ಯದ ವಿವಿಧ ಜಿಲ್ಲೆಗಳ ಶಿಕ್ಷಕರು, ಶಿಕ್ಷಕರ ಸಂಘದ ಪ್ರತಿನಿಧಿಗಳು ಬಸವರಾಜ ಹೊರಟ್ಟಿ ಅವರನ್ನು ಅಭಿನಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.