ಬೆಂಗಳೂರು: ಮಗುವಿಗೆ ಮದ್ಯ ಕುಡಿಸಿದ್ದಲ್ಲದೆ ಅದನ್ನು ಪ್ರಶ್ನಿಸಿದ್ದಕ್ಕಾಗಿ ಪತ್ನಿಯನ್ನು ವಿವಸ್ತ್ರಗೊಳಿಸಿದ್ದ ವ್ಯಕ್ತಿ ಹಾಗೂ ಆತನ ಕುಟುಂಬದವರಿಗೆ ಬಸವೇಶ್ವರನಗರ ಠಾಣೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
‘ಸಂತ್ರಸ್ತೆಯ ಪತಿ ಸುನೀಲ್‌ಕುಮಾರ್, ಅತ್ತೆ ಮಲ್ಲಿಕಾ, ಮಾವ ಪಳನಿ, ಭಾವ ಶಾಂತಕುಮಾರ್ ಹಾಗೂ ಆತನ ಪತ್ನಿ ಸರಿತಾ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಇವರೆಲ್ಲಾ ಇತ್ತೀಚೆಗೆ ಒಟ್ಟಿಗೆ ಮದ್ಯಪಾನ ಮಾಡುತ್ತಿದ್ದರು. ಈ ವೇಳೆ ಮೂರು ವರ್ಷದ ಮಗುವಿಗೆ ಮದ್ಯಪಾನ ಮಾಡಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ವಿಚಾರಣೆಗೆ ಬರುವಂತೆ ಎಲ್ಲರಿಗೂ ನೋಟಿಸ್ ನೀಡಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.