ADVERTISEMENT

ಶಾಸಕರು, ಸಂಸದರ ಜೊತೆ ಜಿ. ಪರಮೇಶ್ವರ ಉಪಾಹಾರ ಕೂಟ

​ಪ್ರಜಾವಾಣಿ ವಾರ್ತೆ
Published 13 ಮೇ 2019, 7:13 IST
Last Updated 13 ಮೇ 2019, 7:13 IST
ಜಿ. ಪರಮೇಶ್ವರ
ಜಿ. ಪರಮೇಶ್ವರ    

ಬೆಂಗಳೂರು:ಮೈತ್ರಿ ಸರ್ಕಾರದಲ್ಲಿ ಬೆಂಗಳೂರಿಗೆ ಸಂಬಂಧಪಟ್ಟ ಹಾಗೇ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದ್ದು, ಮುಂದಿನ ವರ್ಷ ಬಿಬಿಎಂಪಿ ಚುನಾವಣೆ ಬರುತ್ತಿದ್ದು, ಈ ಬಗ್ಗೆ ಚರ್ಚಿಸಲುಬೆಂಗಳೂರಿನ ಎರಡೂ ಪಕ್ಷದ ಶಾಸಕರ ಜೊತೆ ಚರ್ಚೆ ಮಾಡಿದ್ದೇನೆ ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದರು.

ಸದಾಶಿವನಗರದ ತಮ್ಮ ನಿವಾಸದಲ್ಲಿ ಸೋಮವಾರ ನಡೆದ ಉಪಹಾರಕೂಟದಲ್ಲಿ ಬೆಂಗಳೂರು ವ್ಯಾಪ್ತಿಯ ಶಾಸಕರು, ಸಂಸದರು, ವಿಧಾನಪರಿಷತ್ತಿನ ಸದಸ್ಯರು, ಮೇಯರ್ ಹಾಗೂ ಉಪಮೇಯರ್‌ ಪಾಲ್ಗೊಂಡಿದ್ದರು.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ‘ಎರಡೂ ಪಕ್ಷದ ಕಾರ್ಪೋರೇಟರ್‌ಗಳ ಜೊತೆ ಅನ್ಯೋನ್ಯತೆಯಿಂದ ಕೆಲಸ ಮಾಡುವಂತೆ ಎಲ್ಲ ಶಾಸಕರಿಗೆ ಸೂಚಿಸಿದ್ದೇನೆ.‌ ಈ ಹಿನ್ನೆಲೆಯಲ್ಲಿ ಬಿಬಿಎಂಪಿ ವ್ಯಾಪ್ತಿಗೆ ಒಳಪಡುವ ಶಾಸಕರು, ಸಂಸದರು ಮೇಯರ್ ಅವರನ್ನು ಉಪಹಾರಕೂಟಕ್ಕೆ ಆಹ್ವಾನಿಸಿದ್ದೆ’ಎಂದರು.

ADVERTISEMENT

ಬಿಬಿಎಂಪಿ ಬಜೆಟ್ ಸರ್ಕಾರದ ಮಟ್ಟದಲ್ಲಿ ಬಂದಿದೆ ಅದಕ್ಕೂ ಕೂಡ ಕೆಲವೇ‌ ದಿನಗಳಲ್ಲಿ ಒಪ್ಪಿಗೆ ಸಿಗಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿಆಸ್ಪತ್ರೆ , ಪಾರ್ಕ್, ಕ್ರೀಡಾ ಚಟುವಟಿಕೆಗೆ ಹೆಚ್ಚಿಗೆ ಪ್ರೋತ್ಸಾಹ ನೀಡಲು ಸದಸ್ಯರು ಸಲಹೆ ನೀಡಿದ್ದಾರೆ. ಜೊತೆಗೆ ಹೊಸದಾಗಿ ನಾಲ್ಕು ಸರ್ಕಾರಿ ಆಸ್ಪತ್ರೆಗಳನ್ನು ನಿರ್ಮಿಸಲು ಅಭಿಪ್ರಾಯ ತಿಳಿಸಿದ್ದಾರೆ. ಈ ಎಲ್ಲಾ ಅಭಿಪ್ರಾಯವನ್ನು ಪರಿಗಣಿಸಿದ್ದೇವೆ’ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.