ADVERTISEMENT

ಬಿಬಿಎಂಪಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ಸಂಗೊಳ್ಳಿ ರಾಯಣ್ಣನ ಸ್ಮರಣೆ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2020, 7:40 IST
Last Updated 15 ಆಗಸ್ಟ್ 2020, 7:40 IST
ಸ್ವಾತಂತ್ರ್ಯೋತ್ಸವದ ಅಂಗವಾಗಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮೇಯರ್‌ ಎಂ.ಗೌತಮ್‌ ಕುಮಾರ್‌ ಧ್ವಜಾರೋಹಣ ನೆರವೇರಿಸಿದರು. ಪಾಲಿಕೆ ವಿರೋಧ ಪಕ್ಷದ ನಾಐಕ ಅಬ್ದುಲ್‌ ವಾಜಿದ್‌, ಉಪಮೇಯರ್‌ ರಾಮಮೋಹನರಾಜು, ಆಡಳಿತ ಪಕ್ಷದ ನಾಯಕ ಕೆ.ಎ.ಮುನೀಂದ್ರ ಕುಮಾರ್‌ ಹಾಗೂ ಪಾಲಿಕೆ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ಇದ್ದರು

ಬೆಂಗಳೂರು: ಬಿಬಿಎಂಪಿ ವತಿಯಿಂದ 74ನೇ ಸ್ವಾತಂತ್ರ್ಯ ದಿನವನ್ನು ಹಾಗೂ ಸಂಗೊಳ್ಳಿ ರಾಯಣ್ಣ ಜನ್ಮದಿನವನ್ನು ಶನಿವಾರ ಆಚರಿಸಲಾಯಿತು.

ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಸರಳವಾಗಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮೇಯರ್‌ ಎಂ.ಗೌತಮ್‌ ಕುಮಾರ್‌ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಉಪಮೇಯರ್‌ ರಾಮಮೋಹನ ರಾಜು, ಆಯುಕ್ತ ಎನ್‌.ಮಂಜುನಾಥ್ ಪ್ರಸಾದ್ ಆಡಳಿತ ಪಕ್ಷದ ನಾಯಕ ಮುನೀಂದ್ರ ಕುಮಾರ್, ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್, ವಿಶೇಷ ಆಯುಕ್ತರುಗಳು ಸೇರಿದಂತೆ ಬೆರಳೆಣಿಕೆಯಷ್ಟು ಮಂದಿ ಭಾಗವಹಿಸಿದರು.

ಬಳಿಕ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಜನ್ಮದಿನದ ಅಂಗವಾಗಿ ನಗರ ರೈಲು ನಿಲ್ದಾಣದ ಬಳಿ ಇರುವ ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗೆ ಮೇಯರ್‌, ಉಪ ಮೇಯರ್‌ ಹಾಗೂ ಆಯುಕ್ತರು ಪುಷ್ಪನಮನ‌ ಸಲ್ಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.