ADVERTISEMENT

ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್ ಗುಪ್ತಗೆ ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 26 ಜನವರಿ 2022, 6:47 IST
Last Updated 26 ಜನವರಿ 2022, 6:47 IST
ಗೌರವ್ ಗುಪ್ತ
ಗೌರವ್ ಗುಪ್ತ   

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ್ ಗುಪ್ತ ಅವರಿಗೆ ಕೋವಿಡ್ ದೃಢಪಟ್ಟಿದೆ‌. ಹಾಗಾಗಿ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಹಾಗೂ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಬುಧವಾರ ಏರ್ಪಡಿಸಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಿಲ್ಲ.

'ನನಗೆ ಕೋವಿಡ್ ನ ಸೌಮ್ಯ ಲಕ್ಷಣಗಳಿವೆ. ವೈದ್ಯಕೀಯ ಸಲಹೆಯಂತೆ ಮನೆಯಲ್ಲೇ ಪ್ರತ್ಯೇಕವಾಸದಲ್ಲಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದಿರುವವರು ಎಚ್ಚರಿಕೆಯಿಂದ ಇರಬೇಕು ಹಾಗೂ ಅಗತ್ಯ ಬಿದ್ದಲ್ಲಿ ಕೋವಿಡ್ ಪರೀಕ್ಷೆಗೆ ಒಳಪಡಬೇಕು' ಎಂದು ಅವರು ಮನವಿ ಮಾಡಿಕೊಂಡಿದ್ದಾರೆ‌.

ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿ 73ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ ಅವರು ಧ್ವಜಾರೋಹಣೆ ನೆರವೇರಿಸಿದರು. ವಿಶೇಷ ಆಯುಕ್ತರಾದ ತುಳಸಿ ಮದ್ದಿನೇನಿ, ಮನೋಜ್ ಜೈನ್, ಕೆ.ಎ.ದಯಾನಂದ್, ಡಾ. ತ್ರಿಲೋಕ ಚಂದ್ರ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.