ADVERTISEMENT

ಬಿಬಿಎಂಪಿ | ಮುಖ್ಯ ಎಂಜಿನಿಯರ್‌ಗಳ ವರ್ಗ

​ಪ್ರಜಾವಾಣಿ ವಾರ್ತೆ
Published 22 ಜುಲೈ 2025, 23:51 IST
Last Updated 22 ಜುಲೈ 2025, 23:51 IST
<div class="paragraphs"><p>ಬಿಬಿಎಂಪಿ&nbsp;</p></div>

ಬಿಬಿಎಂಪಿ 

   

ಬೆಂಗಳೂರು: ಬಿಬಿಎಂಪಿ ದಕ್ಷಿಣ ವಲಯದಲ್ಲಿ ಹಲವು ವರ್ಷಗಳಿಂದ ಮುಖ್ಯ ಎಂಜಿನಿಯರ್‌ ಆಗಿದ್ದ ಎಸ್‌.ವಿ. ರಾಜೇಶ್‌ ಸೇರಿದಂತೆ ಐವರು ಮುಖ್ಯ ಎಂಜಿನಿಯರ್‌ಗಳನ್ನು ವರ್ಗಾಯಿಸಲಾಗಿದೆ.

ಬೃಹತ್‌ ನೀರುಗಾಲುವೆ ವಿಭಾಗದ ಮುಖ್ಯ ಎಂಜಿನಿಯರ್‌ ಹುದ್ದೆಯನ್ನು ಹೆಚ್ಚುವರಿಯಾಗಿ ಹೊಂದಿದ್ದ ರಾಜೇಶ್‌ ಅವರನ್ನು ದಕ್ಷಿಣ ವಲಯದ ಮುಖ್ಯ ಎಂಜಿನಿಯರ್‌ ಹುದ್ದೆಯಿಂದ ಬಿಡುಗಡೆ ಮಾಡಲಾಗಿದೆ.

ADVERTISEMENT

ದಾಸರಹಳ್ಳಿ ವಲಯದಲ್ಲಿ ಮುಖ್ಯ ಎಂಜಿನಿಯರ್‌ ಆಗಿದ್ದ ಬಸವರಾಜ ಆರ್‌. ಕಬಾಡೆ ಅವರನ್ನು ದಕ್ಷಿಣ ವಲಯದ ಮುಖ್ಯ ಎಂಜಿನಿಯರ್‌ ಹುದ್ದೆಗೆ ವರ್ಗಾಯಿಸಲಾಗಿದ್ದು, ಆರೋಗ್ಯ ಮತ್ತು ನೈರ್ಮಲ್ಯ ವಿಭಾಗದ ಮುಖ್ಯ ಎಂಜಿನಿಯರ್‌ ಹುದ್ದೆಯಲ್ಲಿ ಹೆಚ್ಚುವರಿಯಾಗಿ ಮುಂದುವರಿಸಲಾಗಿದೆ.

ಕೆ.ವಿ. ರವಿ ಅವರನ್ನು ಗುಣ ಭರವಸೆ ಮತ್ತು ಗುಣ ನಿಯಂತ್ರಣ ವಿಭಾಗದ ಮುಖ್ಯ ಎಂಜಿನಿಯರ್‌, ಯಮುನಾ ಅವರನ್ನು ದಾಸರಹಳ್ಳಿ ವಲಯ ಮುಖ್ಯ ಎಂಜಿನಿಯರ್‌, ಬಿ.ಜಿ. ರಾಘವೇಂದ್ರ ಪ್ರಸಾದ್‌ ಅವರನ್ನು ಮಹದೇವಪುರ ವಲಯದ ಮುಖ್ಯ ಎಂಜಿನಿಯರ್‌ ಹುದ್ದೆಗೆ ವರ್ಗಾಯಿಸಲಾಗಿದೆ.

ಯಲಹಂಕ ವಲಯದ ಅಧೀಕ್ಷಕ ಎಂಜಿನಿಯರ್‌ ಎಂ. ಕೃಷ್ಣಮೂರ್ತಿ ಅವರಿಗೆ ವಲಯದ  ಮುಖ್ಯ ಎಂಜಿನಿಯರ್‌ ಹುದ್ದೆಯನ್ನು ಹೆಚ್ಚುವರಿಯಾಗಿ ವಹಿಸಿ ಬಿಬಿಎಂಪಿ ಆಡಳಿತ ವಿಭಾಗದ ಉಪ ಆಯುಕ್ತರು ಆದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.