ಬಿಬಿಎಂಪಿ
ಬೆಂಗಳೂರು: ಬಿಬಿಎಂಪಿಯ ಐವರು ಮುಖ್ಯ ಎಂಜಿನಿಯರ್‌ಗಳನ್ನು ವರ್ಗಾವಣೆ ಮಾಡಿ ನಗರಾಭಿವೃದ್ಧಿ ಇಲಾಖೆ ಆದೇಶಿಸಿದೆ.
ಬಿ.ಜಿ. ರಾಘವೇಂದ್ರ ಅವರನ್ನು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದ (ಬಿಎಸ್‌ಡಬ್ಲ್ಯುಎಂಎಲ್) ಮುಖ್ಯ ಎಂಜಿನಿಯರ್ ಹುದ್ದೆಗೆ ವರ್ಗಾಯಿಸಲಾಗಿದೆ. ಬಿಬಿಎಂಪಿ ರಸ್ತೆ ಮೂಲಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಎಂ. ಲೋಕೇಶ್ ಅವರನ್ನು ಮಹದೇವಪುರ ವಲಯದ ಮುಖ್ಯ ಎಂಜಿನಿಯರ್, ಎಸ್.ಪಿ. ರಂಗನಾಥ್ ಅವರನ್ನು ಯಲಹಂಕ ವಲಯದ ಮುಖ್ಯ ಎಂಜಿನಿಯರ್, ಒಎಫ್‌ಸಿ ವಿಭಾಗದ ಸಿಇ ಹುದ್ದೆಗೆ ಹಾಗೂ ಕೆ.ವಿ. ರವಿ ಅವರನ್ನು ಗುಣ ಭರವಸೆ ಮತ್ತು ಗುಣ ನಿಯಂತ್ರಣ ವಿಭಾಗದ ಮುಖ್ಯ ಎಂಜಿನಿಯರ್ ಹುದ್ದೆಗೆ ವರ್ಗಾಯಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.