ADVERTISEMENT

ಬಿಬಿಎಂಪಿ ಮುಖ್ಯ ಆಯುಕ್ತರ ಫೋಟೊ ದುರುಪಯೋಗ

​ಪ್ರಜಾವಾಣಿ ವಾರ್ತೆ
Published 7 ಜುಲೈ 2022, 19:54 IST
Last Updated 7 ಜುಲೈ 2022, 19:54 IST

ಬೆಂಗಳೂರು: ಬಿಬಿಎಂಪಿ ಮುಖ್ಯ ಆಯುಕ್ತತುಷಾರ್‌ ಗಿರಿನಾಥ್‌ ಅವರ ಹೆಸರು ಹಾಗೂ ಚಿತ್ರವನ್ನು ದುರುಪಯೋಗಪಡಿಸಿಕೊಂಡು ಹಲವರಿಗೆ ಸಂದೇಶ ಕಳುಹಿಸಲಾಗುತ್ತಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂಬ ದೂರು ಸೈಬರ್‌ ಕ್ರೈಂ ವಿಭಾಗದಲ್ಲಿ ದಾಖಲಾಗಿದೆ.

ವ್ಯಕ್ತಿಯೊಬ್ಬ 70765 22681 ಸಂಖ್ಯೆ ಮೂಲಕ ಎಸ್‌ಎಂಎಸ್‌ ಹಾಗೂ ವಾಟ್ಸ್‌ಆ್ಯಪ್‌ ಸಂದೇಶ ಕಳುಹಿಸುತ್ತಿದ್ದಾನೆ. ಸಂದೇಶದಲ್ಲಿ ಮುಖ್ಯ ಆಯುಕ್ತರ ಹೆಸರು, ಚಿತ್ರವನ್ನು ಬಳಸಿಕೊಳ್ಳುತ್ತಿದ್ದಾನೆ. ಚಾಟ್‌ ಮಾಡಿ ಗಿಫ್ಟ್‌ ಕಾರ್ಡ್‌ ಬಗ್ಗೆ ವಿಚಾರಿಸಿ, ವೆಬ್‌ಸೈಟ್‌ ಲಿಂಕ್‌ ಕಳುಹಿಸಿದ್ದಾನೆ. ಅಧಿಕಾರಿಗಳು ಸೇರಿದಂತೆ ಅವರ ಪರಿಚಿತರಿಗೆ ಸಂದೇಶ ಕಳುಹಿಸಲಾಗಿದೆ. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಬಿಬಿಎಂಪಿ ಮಾಹಿತಿ ತಂತ್ರಜ್ಞಾನ ವಿಭಾಗದ ನಿರ್ದೇಶಕರು ಬೆಂಗಳೂರು ನಗರ ಕೇಂದ್ರ ವಿಭಾಗದ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮುಖ್ಯ ಆಯುಕ್ತರ ಹೆಸರಿನಲ್ಲಿ ಇಂತಹ ಯಾವುದೇ ಸಂದೇಶಗಳು ಬಂದರೆ ಕೂಡಲೇ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿ ಎಂದು ತುಷಾರ್‌ ಗಿರಿನಾಥ್‌ ನಾಗರಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.