ADVERTISEMENT

ಬಿಬಿಎಂಪಿ ಗುತ್ತಿಗೆದಾರ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2021, 18:43 IST
Last Updated 7 ಜನವರಿ 2021, 18:43 IST
ವಾಣಿ ಕೃಷ್ಣಂರಾಜು
ವಾಣಿ ಕೃಷ್ಣಂರಾಜು   

ಬೆಂಗಳೂರು: ಗುತ್ತಿಗೆ ಬಾಕಿ ಹಣಕ್ಕಾಗಿ ಅಲೆದಾಡಿ ಬೇಸತ್ತ ಬಿಬಿಎಂ‍ಪಿ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾಲಕ್ಷ್ಮೀ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವೈಯಾಲಿಕಾವಲ್‌ನಲ್ಲಿ ವಾಸವಿದ್ದ 68 ವರ್ಷದ ಕೃಷ್ಣಂರಾಜು (ವಾಣಿ) ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ.

‘ಮಹಾಲಕ್ಷ್ಮೀ ಬಡಾವಣೆಯಲ್ಲಿರುವ ರಾಜಕುಮಾರ್ ಒಳಾಂಗಣ ಕ್ರೀಡಾಂಗಣದ ಬಳಿ ನಿರ್ಮಾಣ ಹಂತದ ಕಟ್ಟಡದ ಕೋಣೆಯೊಂದರಲ್ಲಿ ಬುಧವಾರ ಸಂಜೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ರವಾನಿಸಲಾಯಿತು’ ಎಂದು ಪೊಲೀಸರು ತಿಳಿಸಿದರು.

ADVERTISEMENT

45 ವರ್ಷಗಳಿಂದ ಗುತ್ತಿಗೆದಾರರಾಗಿದ್ದರು. ಮಲ್ಲೇಶ್ವರದಲ್ಲಿ ಗಾಂಧಿಭವನ, ಗೋವಿಂದರಾಜನಗರದಲ್ಲಿ ಕ್ರೀಡಾಂಗಣ, ರಾಜಾಜಿನಗರ ಕಾಂಪ್ಲೆಕ್ಸ್ ಸೇರಿದಂತೆ ಹಲವು ಕಟ್ಟಡಗಳನ್ನು ಇವರು ನಿರ್ಮಾಣ ಮಾಡಿದ್ದರು.ಕಟ್ಟಡ ನಿರ್ಮಾಣವೊಂದರ ಗುತ್ತಿಗೆ ಬಾಕಿ ಹಣ ನೀಡುವಂತೆ ಹಲವು ಬಾರಿ ಪಾಲಿಕೆಗೆ ಮನವಿ ಮಾಡಿದ್ದರು. ₹4 ಕೋಟಿ ಬಾಕಿ ಹಣ ಬಾರದಿದ್ದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

₹2,800 ಕೋಟಿ ಬಾಕಿ: ‘ಪಾಲಿಕೆಯು 2018ರಿಂದ ₹2,800 ಕೋಟಿ ಹಣ ಬಾಕಿ ಉಳಿಸಿಕೊಂಡಿದೆ. ಇದರಿಂದ ಗುತ್ತಿಗೆದಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ಕೂಡಲೇ ಬಾಕಿ ಹಣ ಬಿಡುಗಡೆ ಮಾಡಬೇಕು’ ಎಂದು ಬಿಬಿಎಂಪಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆ.ಟಿ.ಮಂಜುನಾಥ್ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.