ADVERTISEMENT

ಬಿಬಿಎಂಪಿ ನಿಯಂತ್ರಣ ಕೊಠಡಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2024, 15:35 IST
Last Updated 5 ಜೂನ್ 2024, 15:35 IST
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರುವ ಐಸಿಸಿಸಿ ಕೇಂದ್ರದ ಬಗ್ಗೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಅವರಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಮಾಹಿತಿ ನೀಡಿದರು‌
ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರುವ ಐಸಿಸಿಸಿ ಕೇಂದ್ರದ ಬಗ್ಗೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾಶಂಕರ್ ಅವರಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಮಾಹಿತಿ ನೀಡಿದರು‌   

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರುವ ನಿಯಂತ್ರಣ ಕೊಠಡಿ ಹಾಗೂ ಐಸಿಸಿಸಿ ಕೇಂದ್ರವನ್ನು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಸ್‌.ಆರ್. ಉಮಾಶಂಕರ್ ಅವರು ಬುಧವಾರ ಪರಿಶೀಲಿಸಿದರು.

ನಗರದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣ ಕೊಠಡಿಗೆ ಭೇಟಿ ನೀಡಿ ಕಾರ್ಯವೈಖರಿಯನ್ನು ಪರಿಶೀಲಿಸಿದರು. ಸೂಕ್ತ ಮೇಲ್ವಿಚಾರಣೆ ಮಾಡಿ ನಾಗರಿಕರಿಂದ ಬರುವ ದೂರುಗಳಿಗೆ ಕೂಡಲೇ ಸ್ಪಂದಿಸಲು ತಿಳಿಸಿದರು.

ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸಹಾಯವಾಣಿ ಸಂಖ್ಯೆ 1533ಕ್ಕೆ ಬಂದಂತಹ ಕರೆಗಳನ್ನು ಸಿಬ್ಬಂದಿ ಸ್ವೀಕರಿಸಿ, ಸಹಾಯ 2.0 ತಂತ್ರಾಂಶದಲ್ಲಿ ದೂರು ದಾಖಲಿಸಲಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳಿಗೆ ದೂರಿನ ಮಾಹಿತಿ ನೀಡಿ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ADVERTISEMENT

ನಗರದಲ್ಲಿರುವ ರಾಜಕಾಲುವೆಗಳಲ್ಲಿ ಕೆಎಸ್‌ಎನ್‌ಡಿಎಂಸಿ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ ವತಿಯಿಂದ ನೀರಿನ ಮಟ್ಟವನ್ನು ಅಳೆಯುವ ಸೆನ್ಸರ್ ಗಳನ್ನು ಅಳವಡಿಸಲಾಗಿದ್ದು, ಅದನ್ನು ಐಸಿಸಿಸಿ ಕೇಂದ್ರದಿಂದ ಮೇಲ್ವಿಚಾರಣೆ ಮಾಡಲಾಗುತ್ತಿದೆ. ಅದರ ಕಾರ್ಯಾಚರಣೆ, ಅನುಕೂಲದ ಬಗ್ಗೆ ಉಮಾಶಂಕರ್ ಮಾಹಿತಿ ಪಡೆದುಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.