ADVERTISEMENT

ಕೋವಿಡ್‌ ಪೀಡಿತರಿಗೆ ‘ಸೀಲ್‌’ ಇಂದಿನಿಂದ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2021, 21:03 IST
Last Updated 16 ಏಪ್ರಿಲ್ 2021, 21:03 IST
ಗೌರವ್ ಗುಪ್ತ
ಗೌರವ್ ಗುಪ್ತ   

ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಉಲ್ಬಣಗೊಳ್ಳುತ್ತಿದೆ. ಕೋವಿಡ್ ಸೋಂಕು ದೃಢಪಟ್ಟವರಿಗೆ ಶನಿವಾರದಿಂದಲೇ ಮೊಹರು (ಸೀಲ್) ಹಾಕುವ ಕಾರ್ಯವನ್ನು ಪ್ರಾರಂಭಿಸಲಾಗುತ್ತದೆ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಹೇಳಿದರು.

ಬಿಬಿಎಂಪಿಯ ಎಂಟು ವಲಯಗಳಲ್ಲಿ ಕೋವಿಡ್‌ ಸಿದ್ಧತೆ ಕುರಿತು ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಸೀಲ್‌ ಹಾಕಲು ಬೇಕಾದ ಶಾಯಿ(ಇಂಕ್)ಯನ್ನು ಎಲ್ಲ ವಲಯಗಳಿಗೂ ಕೂಡಲೇ ವ್ಯವಸ್ಥೆ ಮಾಡಬೇಕು’ ಎಂದು ಮುಖ್ಯ ಆರೋಗ್ಯಾಧಿಕಾರಿಗೆ ಸೂಚನೆ ನೀಡಿದರು.

‘ಸರ್ಕಾರದ ಆದೇಶದಂತೆ ಖಾಸಗಿ ಆಸ್ಪತ್ರೆಗಳಲ್ಲಿ ಮೀಸಲಿಡಬೇಕಿರುವ ಹಾಸಿಗೆ ಸಾಮರ್ಥ್ಯವನ್ನು ಇನ್ನೂ ಹೆಚ್ಚಳವಾಗುವಂತೆ ಕ್ರಮವಹಿಸಬೇಕು. ಬೂತ್ ಮಟ್ಟದ ತಂಡಗಳ ಕಾರ್ಯನಿರ್ವಹಣೆಯನ್ನು ಸಕ್ರಿಯವಾಗಿಸಿ ಸಂಪರ್ಕ ಪತ್ತೆ ಕಾರ್ಯ ಸರಿಯಾಗಿ ಮಾಡಬೇಕು, ಎಲ್ಲ ವಲಯಗಳಲ್ಲಿಯೂ ಕಂಟೈನ್‌ಮೆಂಟ್‌ ಝೋನ್‌ ಒಂದೇ ಮಾದರಿಯಲ್ಲಿರಬೇಕು’ ಎಂದೂ ಹೇಳಿದರು.

ADVERTISEMENT

ಆರೈಕೆ ಕೇಂದ್ರ ತೆರೆಯಿರಿ:‘ಮನೆಗಳಲ್ಲಿ ಪ್ರತ್ಯೇಕವಾಸವಿದ್ದು ಚಿಕಿತ್ಸೆ ಪಡೆಯುತ್ತಿರುವವರ ಮನೆಗೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು.ನಗರದಲ್ಲಿ ಸದ್ಯ ಗುರುತಿಸಿರುವ ಕೋವಿಡ್ ಆರೈಕೆ ಕೇಂದ್ರಗಳನ್ನು ತ್ವರಿತವಾಗಿ ತೆರೆಯಬೇಕು’ ಎಂದೂ ಹೇಳಿದರು.

ಹಾಸಿಗೆ ನಿಯೋಜನೆ ವಿಕೇಂದ್ರೀಕರಣ:‘ಸದ್ಯ ಪಾಲಿಕೆ ವ್ಯಾಪ್ತಿಯಲ್ಲಿ ಹಾಸಿಗೆ ನಿಯೋಜನೆ (ಬೆಡ್‌ ಅಲಾಟ್‌ಮೆಂಟ್‌) ವ್ಯವಸ್ಥೆಯನ್ನು ವಿಕೇಂದ್ರೀಕರಣಗೊಳಿಸಿದ್ದು, ಎಲ್ಲಿಯೂ ಹಾಸಿಗೆಗಳ ಕೊರತೆ ಕಂಡು ಬರದಂತೆ ಕ್ರಮವಹಿಸಲಾಗಿದೆ’ ಎಂದೂ ಗೌರವ್ ಗುಪ್ತ ಹೇಳಿದರು.

‘ಪ್ರಯೋಗಾಲಯಗಳಲ್ಲಿ ತ್ವರಿತ ಫಲಿತಾಂಶ ಬರುವಂತೆ ಮಾಡಲಾಗಿದೆ. ಬೂತ್ ಮಟ್ಟದ ಅಧಿಕಾರಿಗಳನ್ನು ಸರಿಯಾಗಿ ಬಳಸಿಕೊಂಡು ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಪತ್ತೆಮಾಡಿ ಕೋವಿಡ್ ಪರೀಕ್ಷೆ ಮಾಡಲಾಗುತ್ತಿದೆ’ ಎಂದೂ ಹೇಳಿದರು.

ದಾಸರಹಳ್ಳಿಗೆ ಕೋವಿಡ್ ಕೇಂದ್ರ ಅಗತ್ಯ

ಬೆಂಗಳೂರು: ಕೋವಿಡ್‌ ಮೂರನೇ ಅಲೆ ತಪ್ಪಿಸಲು ಸಾರ್ವಜನಿಕರು ಕಡ್ಡಾಯವಾಗಿ ಲಸಿಕೆಯನ್ನು ಹಾಕಿಸಿಕೊಳ್ಳಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರು ಮನವಿ ಮಾಡಿದ್ದಾರೆ.
ಲಸಿಕೆ ಹಾಕಿಸಿಕೊಳ್ಳುವ ಬಗ್ಗೆ ಉದಾಸೀನತೆ ಬಿಡಬೇಕು. ಇಲ್ಲವಾದರೆ ಮೂರನೇ ಅಲೆ ತಡೆಯಲು ಸಾಧ್ಯವಿಲ್ಲ ಎಂದು ಅವರು ಸುದ್ದಿಗಾರರಿಗೆ ಶುಕ್ರವಾರ ತಿಳಿಸಿದರು.

‘ಲಸಿಕೆ ಹಾಕಿಸಿಕೊಂಡರೆ ಕೋವಿಡ್‌ ಸೋಂಕು ತಗುಲುವುದಿಲ್ಲ ಎಂದು ಖಚಿತವಾಗಿ ಹೇಳಲು ಸಾಧ್ಯವಿಲ್ಲ. ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಸಾವಿನ ಪ್ರಮಾಣವೂ ಕಡಿಮೆಯಾಗುತ್ತದೆ. ಹಲವು ದೇಶಗಳಲ್ಲಿ ಈಗಾಗಲೇ ಮೂರನೇ ಅಲೆ ಕಾಣಿಸಿಕೊಂಡಿದೆ. ನಮ್ಮಲ್ಲಿ ಅದನ್ನು ತಡೆಯಬೇಕಿದ್ದರೆ, ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು’ ಎಂದರು.

3ನೇ ಅಲೆ ತಪ್ಪಿಸಲು ಲಸಿಕೆ ಹಾಕಿಸಿಕೊಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.