ADVERTISEMENT

ಕೋವಿಡ್‌ ಲಸಿಕೆ: 23 ಮಂದಿಗೆ ಆರೋಗ್ಯ ಸಮಸ್ಯೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2021, 17:34 IST
Last Updated 21 ಜನವರಿ 2021, 17:34 IST

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಗುರುವಾರ ಕೋವಿಡ್ ಲಸಿಕೆ ಹಾಕಿಸಿಕೊಂಡ 23 ಮಂದಿಯಲ್ಲಿ ಸಣ್ಣ ಪ್ರಮಾಣದಲ್ಲಿ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದೆ.

ಪಶ್ಚಿಮ ವಲಯದ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಹಾಕಿಸಿಕೊಂಡ 22 ಮಂದಿಯ ಮತ್ತು ದಕ್ಷಿಣ ವಲಯದ ಲಸಿಕಾ ಕೇಂದ್ರವೊಂದರಲ್ಲಿ ಲಸಿಕೆ ಪಡೆದ ಒಬ್ಬರ ಆರೋಗ್ಯದಲ್ಲಿ ಮಾತ್ರ ತುಸು ಏರುಪೇರು ಕಂಡುಬಂದಿದೆ. ಗಂಭೀರ ಸಮಸ್ಯೆಗಳು ಯಾವುವೂ ವರದಿಯಾಗಿಲ್ಲ ಎಂದು ಬಿಬಿಎಂಪಿ ತಿಳಿಸಿದೆ.

ಸರ್ಕಾರಿ ವೈದ್ಯಕೀಯ ಸಂಸ್ಥೆಗಳ 2,328 ಹಾಗೂ ಖಾಸಗಿ ವೈದ್ಯಕೀಯ ಸಂಸ್ಥೆಗಳ 8,141 ಆರೋಗ್ಯ ಕಾರ್ಯಕರ್ತರು ಸೇರಿ ಒಟ್ಟು 10,469 ಮಂದಿಗೆ ಗುರುವಾರ ಲಸಿಕೆ ಹಾಕಲು ಉದ್ದೇಶಿಸಲಾಗಿತ್ತು. ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ 1,027 ಹಾಗೂ ಖಾಸಗಿ ಆಸ್ಪತ್ರೆಗಳ ಲಸಿಕಾ ಕೇಂದ್ರಗಳಲ್ಲಿ 4,383 ಮಂದಿ ಲಸಿಕೆ ಹಾಕಿಸಿಕೊಂಡರು.ಗುರುವಾರ ಒಟ್ಟು 115 ಕೇಂದ್ರಗಳಲ್ಲಿ ಲಸಿಕೆ ಹಾಕಲಾಗಿದ್ದು, ಹೆಸರು ನೋಂದಾಯಿಸಿದ್ದವರಲ್ಲಿ ಶೇ 51.68 ಮಂದಿ ಮಾತ್ರ ಲಸಿಕೆ ಪಡೆದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.