ADVERTISEMENT

BBMP ಚುನಾವಣೆ: ಸುಪ್ರೀಂಕೋರ್ಟ್‌ಗೆ ಹೆಚ್ಚುವರಿ ಪ್ರಮಾಣಪತ್ರ ಸಲ್ಲಿಸಿದ UDD ಇಲಾಖೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 1 ಆಗಸ್ಟ್ 2025, 6:36 IST
Last Updated 1 ಆಗಸ್ಟ್ 2025, 6:36 IST
<div class="paragraphs"><p>ಬಿಬಿಎಂಪಿ</p></div>

ಬಿಬಿಎಂಪಿ

   

ನವದೆಹಲಿ: ಬಿಬಿಎಂಪಿಗೆ ಶೀಘ್ರ ಚುನಾವಣೆ ನಡೆಸುವ ಸಂಬಂಧ ನಗರಾಭಿವೃದ್ಧಿ ಇಲಾಖೆಯಿಂದ ಇಂದು ಮತ್ತೆ ಸುಪ್ರೀಂ ಕೋರ್ಟ್‌ಗೆ ಹೆಚ್ಚುವರಿ ಪ್ರಮಾಣಪತ್ರ ಸಲ್ಲಿಸಲಾಗಿದೆ.

ನವೆಂಬರ್ ಅಂತ್ಯದ ಒಳಗೆ ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ‌ ಹಾಗೂ ಮೀಸಲಾತಿ ಪ್ರಕ್ರಿಯೆ ಮುಗಿಯಲಿದೆ. ಅದಕ್ಕೂ ಮುನ್ನವೂ ಈ ಪ್ರಕ್ರಿಯೆ ಮುಗಿಯುವ ಸಂಭವ ಇದೆ. ಕೋರ್ಟ್ ಸೂಚಿಸಿದರೆ ಶೀಘ್ರ ಚುನಾವಣೆ ನಡೆಸಲು ಸರ್ಕಾರ ಸಿದ್ಧ ಎಂದು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

ADVERTISEMENT

ಬಿಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಹಾಗೂ ಜೋಯ್‌ಮಾಲ್ಯ ಬಾಗ್ಚಿ ಅವರಿರುವ ಪೀಠವು ಸೋಮವಾರ ನಡೆಸಲಿದೆ.

ಬಿಬಿಎಂಪಿ ಸದಸ್ಯರ ಅಧಿಕಾರ ಅವಧಿಯು 2019ರ ಸೆಪ್ಟೆಂಬರ್ 10ರಂದು ಪೂರ್ಣಗೊಂಡಿತ್ತು. ಆರು ವಾರಗಳಲ್ಲಿ ಬಿಬಿಎಂಪಿಗೆ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚಿಸಿ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ 2020ರ ಡಿಸೆಂಬರ್ 18ರಂದು ಅಮಾನತಿನಲ್ಲಿ ಇರಿಸಿತ್ತು. ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ (ತಿದ್ದುಪಡಿ) ಕಾಯ್ದೆ– 2020ರ ಅನ್ವಯ ರಚಿಸಲಾಗುವ 243 ವಾರ್ಡ್‌ಗಳ ಬದಲಿಗೆ, ಮೊದಲಿದ್ದ 198 ವಾರ್ಡ್‌ಗಳಿಗೆ ಚುನಾವಣೆ ನಡೆಸುವಂತೆ ಹೈಕೋರ್ಟ್ ನೀಡಿದ್ದ ಆದೇಶದ ಸಿಂಧುತ್ವ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.