ADVERTISEMENT

ಬಿಬಿಎಂಪಿ: ಮತದಾರರ ಅಂತಿಮ ಪಟ್ಟಿ ಪ್ರಕಟ, ವೀಕ್ಷಿಸುವುದು ಹೇಗೆ? ಇಲ್ಲಿದೆ ವಿವರ

​ಪ್ರಜಾವಾಣಿ ವಾರ್ತೆ
Published 12 ಜನವರಿ 2022, 20:19 IST
Last Updated 12 ಜನವರಿ 2022, 20:19 IST
   

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಮತದಾರರ ಅಂತಿಮ ಪಟ್ಟಿಯನ್ನು (2022ರ ಜ.1ಕ್ಕೆ ಅನ್ವಯವಾಗುವಂತೆ) ಸಿದ್ಧಪಡಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿನಮತದಾರರ ನೊಂದಣಾಧಿಕಾರಿ ಕಚೇರಿಗಳಲ್ಲಿ, ಮತದಾರರ ಸಹಾಯಕ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಮತ್ತು ವಾರ್ಡ್ ಕಚೇರಿಗಳಲ್ಲಿ ಮತದಾರರ ಅಂತಿಮ ಪಟ್ಟಿಯನ್ನು ಇದೇ 13 ರಂದು ಪ್ರಕಟಿಸಲಾಗುತ್ತಿದೆ.

ರಾಜ್ಯದ ಮುಖ್ಯ ಚುನಾವಣಾಧಿಕಾರಿ ಕಚೇರಿಯ ವೆಬ್‌ಸೈಟ್‌ನಲ್ಲಿ (www.ceokarnataka.kar.nic.in) ಹಾಗೂ ಬಿಬಿಎಂಪಿ ವೆಬ್‌ಸೈಟ್‌ನಲ್ಲಿ (www.bbmp.gov.in) ಮತದಾರರ ಅಂತಿಮ ಪಟ್ಟಿಯನ್ನು ನೋಡಬಹುದು.

ADVERTISEMENT

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 94,92,564 ಮತದಾರರಿದ್ದಾರೆ. ಅವರಲ್ಲಿ 49,34,810 ಮಂದಿ ಪುರುಷರು, 45,56,097 ಮಂದಿ ಮಹಿಳೆಯರು, 1,657 ಮಂದಿ ತೃತೀಯ ಲಿಂಗಿಗಳು ಎಂದು ಬಿಬಿಎಂಪಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.