ಬೆಂಗಳೂರು: ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ (ಬಿಬಿಎಂಪಿ) ನಿಗದಿತ ಅವಧಿಯಲ್ಲೇ ಚುನಾವಣೆ ನಡೆಯಲಿದೆ. ಮೀಸಲಾತಿಯನ್ನು ಕಾನೂನು ಪ್ರಕಾರ ಶೀಘ್ರ ನಿಗದಿಪಡಿಸಲಾಗುವುದು’ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.
‘ವಾರ್ಡ್ ಪುನರ್‌ವಿಂಗಡಣೆ ಕಾರ್ಯ ಪೂರ್ಣಗೊಂಡಿದ್ದು ನ್ಯಾಯಾಲಯಕ್ಕೆ ಕಳುಹಿಸಲಾಗಿದೆ.ಬಿಬಿಎಂಪಿ ಚುನಾವಣೆ ಮುಂದೂಡುವ ಪ್ರಶ್ನೆಯೇ ಇಲ್ಲ. ಇಲ್ಲಿ 5 ವರ್ಷವೂ ನಮ್ಮದೇ ಆಡಳಿತ ಇರಬೇಕು ಎಂಬುದು ನಮ್ಮ ಆಶಯ. ಅದರಂತೆ ಚುನಾವಣೆ ನಡೆಸಿ, ನಮ್ಮ ಆಡಳಿತವನ್ನು ಪುನರ್ ಸ್ಥಾಪಿಸುತ್ತೇವೆ’ ಎಂದು ಅವರು ಶನಿವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.