ADVERTISEMENT

ಬಿಬಿಎಂಪಿ ವಿದ್ಯುತ್‌ ವಿಭಾಗ ರಾತ್ರಿ 8.30ರವರೆಗೂ ಕೆಲಸ

​ಪ್ರಜಾವಾಣಿ ವಾರ್ತೆ
Published 8 ಮೇ 2024, 23:15 IST
Last Updated 8 ಮೇ 2024, 23:15 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ಬಿಬಿಎಂಪಿಯ ವಿದ್ಯುತ್‌ ವಿಭಾಗದ ಎಂಜಿನಿಯರ್‌ಗಳು ಹಾಗೂ ಅಧಿಕಾರಿಗಳು ರಾತ್ರಿ 8.30ರವರೆಗೂ ಕಾರ್ಯನಿರ್ವಹಿಸಲು ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಆದೇಶಿಸಿದ್ದಾರೆ.

ವಿದ್ಯುತ್ ವಿಭಾಗಕ್ಕೆ ಸಂಬಂಧಿಸಿದಂತೆ, ಸಾರ್ವಜನಿಕರ ವಲಯದಿಂದ ದೂರುಗಳು ಬರುತ್ತಿವೆ. ಈ ದೂರುಗಳು ಸಂಜೆ 6ರಿಂದ ರಾತ್ರಿ 9ರವರೆಗೆ ಹೆಚ್ಚು ಬರುತ್ತಿವೆ. ಬೀದಿ ದೀಪಗಳ ನಿರ್ವಹಣೆಗೆ ನಿಯೋಜಿಸಲ್ಪಟ್ಟ ಗುತ್ತಿಗೆದಾರರು ನಿಗದಿಪಡಿಸಲಾದ ಸಮಯಕ್ಕೆ ಅವುಗಳನ್ನು ಸರಿಪಡಿಸದಿರುವುದು ಕಂಡುಬಂದಿದೆ. ಬಿಬಿಎಂಪಿ ವಿದ್ಯುತ್ ವಿಭಾಗದ ಮೇಲುಸ್ತುವಾರಿಯಲ್ಲಿ ಕಾರ್ಯಕ್ಷಮತೆ ಇಲ್ಲದಿರುವುದು ಕಂಡುಬಂದಿದೆ.

ADVERTISEMENT

ಆದ್ದರಿಂದ, ವಿದ್ಯುತ್‌ ವಿಭಾಗದ ಕಾರ್ಯ ಅವಧಿಯನ್ನು ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಹಾಗೂ ಸಂಜೆ 5ರಿಂದ ರಾತ್ರಿ 8.30ರವರೆಗೆ ನಿಗದಿಪಡಿಸಲಾಗಿದೆ. ವಿದ್ಯುತ್‌ ವಿಭಾಗದ ಎಲ್ಲ ಅಧೀಕ್ಷಕ ಎಂಜಿನಿಯರ್‌, ಕಾರ್ಯಪಾಲಕ ಎಂಜಿನಿಯರ್‌, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌, ಸಹಾಯಕ/ ಕಿರಿಯ ಎಂಜಿನಿಯರ್‌, ಗುತ್ತಿಗೆ ಎಂಜಿನಿಯರ್‌ಗಳು ಈ ಅವಧಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದ್ದಾರೆ.

ಮಳೆ: ಮುಂಜಾಗ್ರತಾ ಕ್ರಮಕ್ಕೆ ಸೂಚನೆ

ಬೆಂಗಳೂರು: ನಗರದಲ್ಲಿ ಮಳೆಗಾಲದ ವೇಳೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಮೆಟ್ರೊ ಕಾಮಗಾರಿ ನಡೆಯುವ ಸ್ಥಳಗಳಿಗೆ ಭೇಟಿ ನೀಡಿ ಮಳೆ ನೀರಿನ ಸರಾಗ ಹರಿವಿಗೆ ಕ್ರಮ ಕೈಗೊಳ್ಳಬೇಕು. ರಾಜಕಾಲುವೆ ಹಾಗೂ ರಸ್ತೆ ಬದಿ ಚರಂಡಿಗಳಲ್ಲಿ ಹೂಳನ್ನು ತ್ವರಿತಗತಿಯಲ್ಲಿ
ತೆರವುಗೊಳಿಸಬೇಕು. ಜೋರು ಮಳೆ ಸಮಯದಲ್ಲಿ ರಸ್ತೆಗಳ ಮೇಲೆ ಹೆಚ್ಚು ನೀರು ನಿಂತು ವಾಹನಗಳ ಸಂಚಾರಕ್ಕೆ ಹೆಚ್ಚು ಸಮಸ್ಯೆಯಾದಂತೆ ನೋಡಿಕೊಳ್ಳಬೇಕು ಎಂದರು.

ಮಳೆ ಸಂದರ್ಭದಲ್ಲಿ ಬಿದ್ದಂತಹ ಮರಗಳು ಹಾಗೂ ರೆಂಬೆ/ಕೊಂಬೆಗಳನ್ನು ತ್ವರಿತಗತಿಯಲ್ಲಿ ತೆರವುಗೊಳಿಸಲು 28 ತಂಡಗಳು ಕಾರ್ಯನಿರ್ವಹಿಸುತ್ತಿವೆ. ಜೊತೆಗೆ ಹೆಚ್ಚುವರಿಯಾಗಿ 6 ತಂಡ ಗಳನ್ನು ನಿಯೋಜಿಸಲಾಗಿದೆ. ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವ ದೃಷ್ಠಿಯಿಂದ ವಲಯವಾರು 8 ದ್ವಿಚಕ್ರ ವಾಹನಗಳ ತಂಡಗಳನ್ನು ನಿಯೋಜಿಸಲಾಗುತ್ತಿದೆ ಎಂದು ಹೇಳಿದರು.

ಅಗ್ನಿಶಾಮಕ ಠಾಣೆ ಹಾಗೂ ಎಸ್.ಡಿ.ಆರ್.ಎಫ್ ಇಲಾಖೆಗಳ ಜೊತೆ ಆಯಾ ವಲಯ ಅಧಿಕಾರಿಗಳು ಸಂಪರ್ಕ ದಲ್ಲಿರಬೇಕು. ಬೆಸ್ಕಾಂ, ಜಲಮಂಡಳಿ ಸೇರಿದಂತೆ ಇನ್ನಿತರೆ ಇಲಾಖೆಗಳನ್ನು ಒಳಗೊಂಡಂತೆ ಆಯಾ ವಲಯದ ಉಪ ವಿಭಾಗವಾರು ವ್ಯಾಟ್ಸ್‌ಆ್ಯಪ್ ಗ್ರೂಪ್‌ ರಚಿಸಿಕೊಂಡು, ಆ ಮೂಲಕ ಬಂದಂತಹ ದೂರು, ಸಮಸ್ಯೆಗಳನ್ನು ಕೂಡಲೆ ಇತ್ಯರ್ಥ
ಪಡಿಸಬೇಕೆಂದು ಸೂಚಿಸಿದರು.

ರಸ್ತೆ ಬದಿ, ರಾಜಕಾಲುವೆಗಳ ಪಕ್ಕದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಭಗ್ನಾವಶೇಷಗಳನ್ನು ಹಾಕಿದರೆ ದಂಡ ವಿಧಿಸಬೇಕು. ಈ ಬಗ್ಗೆ ಘನತ್ಯಾಜ್ಯ ವಿಭಾಗವು ಸಕ್ರಿಯವಾಗಿ ನಿಗಾವಹಿ ಸಬೇಕು ಎಂದರು. ಯೋಜನಾ ವಿಭಾಗದ ವಿಶೇಷ ಆಯುಕ್ತ ಡಾ.ಕೆ.ಹರೀಶ್ ಕುಮಾರ್, ವಿಪತ್ತು ನಿರ್ವಹಣೆಯ ವಿಶೇಷ ಆಯುಕ್ತ ಸುರೋಳ್ಕರ್ ವಿಕಾಸ್ ಕಿಶೋರ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.