ADVERTISEMENT

ಮೇಲ್ಸೇತುವೆ ಕಾಮಗಾರಿ ತಡೆ ಆದೇಶ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 3 ಜೂನ್ 2019, 20:00 IST
Last Updated 3 ಜೂನ್ 2019, 20:00 IST

ಬೆಂಗಳೂರು: ‘ಬೃಹತ್ ಬೆಂಗಳೂರು ಮಹಾನಗರ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ಮೇಲ್ಸೇತುವೆಗೆ (ಎಲಿವೇಟೆಡ್‌ ಕಾರಿಡಾರ್) ಸಂಬಂಧಿಸಿದ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳಬಾರದು’ ಎಂಬ ಆದೇಶವನ್ನು ಹೈಕೋರ್ಟ್‌ ಇದೇ 17ರವರೆಗೆ ವಿಸ್ತರಿಸಿದೆ.

ಈ ಕುರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಸ್‌.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಹೆಚ್ಚುವರಿ ಅಡ್ವೊಕೇಟ್ ಜನರಲ್ ದಿನೇಶ್‌ ರಾವ್ ಅವರು ಕಾಲಾವಕಾಶ ಕೋರಿದ ಕಾರಣ ವಿಚಾರಣೆ ಮುಂದೂಡಿದ ನ್ಯಾಯಪೀಠ, 2019ರ ಏಪ್ರಿಲ್‌ 26ರಂದು ನೀಡಿದ್ದ ಮಧ್ಯಂತರ ಆದೇಶವನ್ನು ವಿಸ್ತರಿಸಿತು.

ADVERTISEMENT

ಬೆಂಗಳೂರು ಮಹಾನಗರ ಯೋಜನಾ ಸಮಿತಿ (ಬಿಎಂಪಿಸಿ) ರಚನೆ ಪ್ರಶ್ನಿಸಿ, ‘ನಮ್ಮ ಬೆಂಗಳೂರು ಫೌಂಡೇಶನ್‌’ ಪ್ರತಿನಿಧಿ ಶ್ರೀಧರ ಪಬ್ಬಿಶೆಟ್ಟಿ ಮತ್ತು ‘ಸಿಟಿಜನ್‌ ಆ್ಯಕ್ಷನ್‌ ಫೋರಂ’ ಪ್ರತಿನಿಧಿ ವಿಜಯನ್‌ ಮೆನನ್‌ ಸಲ್ಲಿಸಿರುವ ಅರ್ಜಿ ಇದಾಗಿದೆ.

ಬಿಎಂಪಿಸಿಯಲ್ಲಿ ಸಂಸದರು, ಶಾಸಕರು ಮತ್ತು ವಿಧಾನಪರಿಷತ್ ಸದಸ್ಯರನ್ನು ಸೇರ್ಪಡೆ ಮಾಡಿರುವ ಕಾನೂನಿನ ಸಿಂಧುತ್ವವನ್ನು ಅರ್ಜಿದಾರರು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.