ADVERTISEMENT

ಬಿಬಿಎಂಪಿ ಅರಣ್ಯ ಘಟಕದ ಅಧಿಕಾರಿಗಳಿಗೆ ಪೊಲೀಸರ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 23 ಜೂನ್ 2025, 19:49 IST
Last Updated 23 ಜೂನ್ 2025, 19:49 IST
<div class="paragraphs"><p>ಬಿಬಿಎಂಪಿ&nbsp;</p></div>

ಬಿಬಿಎಂಪಿ 

   

ಬೆಂಗಳೂರು: ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಅರಣ್ಯ ಘಟಕದ ಅಧಿಕಾರಿಗಳಿಗೆ ಹನುಮಂತನಗರ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮರದ ಕೊಂಬೆ ಬಿದ್ದು ಅಕ್ಷಯ್ ಅವರು ಮೃತಪಟ್ಟಿದ್ದರು. ಅಕ್ಷಯ್ ಅವರ ಸಹೋದರ ಬೆನಕರಾಜ್ ಅವರ ದೂರು ಆಧರಿಸಿ, ಬಿಬಿಎಂಪಿ ಅರಣ್ಯ ವಿಭಾಗದ ಆರ್‌ಎಫ್‌ಒ, ಎಸಿಎಫ್, ಡಿಎಫ್‌ಒ ಮತ್ತು ಅರಣ್ಯ ಇಲಾಖೆಯ ಇತರೆ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು.

ADVERTISEMENT

ಸ್ಥಳ ಮಹಜರು ನಡೆಸಲಾಗಿದೆ. ವಿಚಾರಣೆಗೆ ಬರುವಂತೆ ಅಧಿಕಾರಿಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.